ಹೈದರಾಬಾದ್:ಜನನಿಬಿಡ ರಸ್ತೆಯಲ್ಲಿ ಚಾಲಕನೊಬ್ಬ ನಿರ್ಲಕ್ಷ್ಯದಿಂದ ಕಾರಿನ ಬಾಗಿಲು ತೆರೆದ ಪರಿಣಾಮ ಎರಡು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಎಲ್​.ಬಿ.ನಗರದಲ್ಲಿ ನಡೆದಿದೆ.
ಮೃತ ಮಗುವನ್ನು ಧನಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಈ ಘಟನೆ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಆ.15ರಂದು ಮನೆಯೊಡತಿಯ ಖಾತೆಗೆ 2000 ರೂ. ಜಮೆ; ಗೃಹಲಕ್ಷ್ಮಿ ಯೋಜನೆಯ ಷರತ್ತುಗಳೇನು? ಇಲ್ಲಿದೆ ಪೂರ್ಣ ಮಾಹಿತಿ…
ಚಾಲಕನೊಬ್ಬ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ರಸ್ತೆ ಮಧ್ಯದಲ್ಲಿ ಕಾರು ನಿಲ್ಲಿಸಿ, ಏಕಾಏಕಿ ಬಾಗಿಲನ್ನು ತೆರೆದಿದ್ದಾನೆ. ದುರಂತವೆಂದರೆ, ಸೈಯದ್ ಮತ್ತು ಶಶಿರೇಖಾ ಎಂಬ ದಂಪತಿ ತಮ್ಮ ಮಗಳು ಧನಲಕ್ಷ್ಮಿಯೊಂದಿಗೆ ಕಾರಿನ ಹಿಂದೆ ಬೈಕ್​ನಲ್ಲಿ ಬರುತ್ತಿದ್ದರು.
ಕಾರಿನ ಬ ಬೈಕ್‌ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದ್ದು, ಮಗು ಮೃತಪಟ್ಟಿದೆ ಈ ಹೃದಯವಿದ್ರಾವಕ ಘಟನೆ ಸಮೀಪದಲ್ಲೇ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೋಲಿಸರು ಆರೋಪಿಗಾಗಿ ಹುಡುಕಾಡುತ್ತಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − nine =
Remember me
