ನವದೆಹಲಿ:ಸಾರ್ವಜನಿಕ ಸುರಕ್ಷತಾ ಕಾನೂನಿನನ್ವಯ (ಪಿಎಸ್​ಎ) ಏಳು ತಿಂಗಳಿಂದ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯ ಫಾರೂಕ್ ಅಬ್ದುಲ್ಲಾರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಕಳೆದ ವರ್ಷ ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ಸಂದರ್ಭದಲ್ಲಿ ನ್ಯಾಷನಲ್ ಕಾನ್ಪರೆನ್ಸ್ ನಾಯಕ ಫಾರೂಕ್ ಅಲ್ಲದೆ ಅವರ ಮಗ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಪಿಡಿಪಿ ನಾಯಕಿ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಸೇರಿದಂತೆ ಅನೇಕ ರಾಜಕೀಯ ನಾಯಕರನ್ನು ಗೃಹಬಂಧನಕ್ಕೆ ಒಳಪಡಿಸಲಾಗಿತ್ತು. ಈಗ ಅಬ್ದುಲ್ಲಾರನ್ನು ಮಾತ್ರ ಬಿಡುಗಡೆ ಮಾಡಲಾಗಿದೆ.
ಬಿಡುಗಡೆ ಆದೇಶಕ್ಕೆ ಜಮ್ಮು- ಕಾಶ್ಮೀರದ ಪ್ರಧಾನ ಕಾರ್ಯದರ್ಶಿ ಶಲೀನ್ ಕಾಬ್ರಾ ಸಹಿ ಹಾಕಿದ್ದಾರೆ. ಅಬ್ದುಲ್ಲಾರ ಬಂಧನವನ್ನು ಖಂಡಿಸಿದ್ದ ಪ್ರತಿಪಕ್ಷಗಳು, ಬಲವಂತದ ಆಡಳಿತಾತ್ಮಕ ಕ್ರಮಗಳ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರಜಾಸತ್ತಾತ್ಮಕ ಭಿನ್ನಮತವನ್ನು ಬಗ್ಗುಬಡಿಯುತ್ತಿದೆ ಎಂದು ಆರೋಪಿಸಿದ್ದವು.
ಎಲ್ಲ ಬಂಧಿತರ ಬಿಡುಗಡೆ ನಂತರ ಮುಂದಿನ ಕ್ರಮ: ಬಂಧಿತ ಎಲ್ಲ ನಾಯಕರ ಬಿಡುಗಡೆಯ ನಂತರ ಮುಂದಿನ ಕಾರ್ಯದ ಬಗ್ಗೆ ಯೋಚಿಸಲಾಗುವುದು ಎಂದು ಗೃಹಬಂಧನದಿಂದ ಬಿಡುಗಡೆಯಾಗಿರುವ ಅಬ್ದುಲ್ಲಾ ಹೇಳಿದ್ದಾರೆ.
‘ನನ್ನ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಸಂಸತ್ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವೆ. ಇತರ ರಾಜಕೀಯ ನಾಯಕರೂ ಶೀಘ್ರವೇ ಬಿಡುಗಡೆಗೊಳ್ಳುತ್ತಾರೆಂದು ಆಶಿಸುತ್ತೇನೆ’ ಎಂದಿದ್ದಾರೆ.
ವ್ಯಾಪಕ ಸ್ವಾಗತ:ಫಾರೂಕ್ ಅಬ್ದುಲ್ಲಾ ಬಿಡುಗಡೆಗೆ ರಾಜಕೀಯ ವಲಯದಲ್ಲಿ ಅಪಾರ ಸಂತೋಷ ವ್ಯಕ್ತವಾಗಿದೆ. ಬಿಡುಗಡೆಯನ್ನು ಸ್ವಾಗತಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಅಬ್ದುಲ್ಲಾ ಸಂಸತ್ತಿನಲ್ಲಿ ಮುಂದಿನ ಸಾಲಿನಲ್ಲಿದ್ದು ತಮ್ಮ ಕಾರ್ಯಭಾರ ನಿರ್ವಹಿಸುವುದನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
ಯಾವತ್ತೋ ಅವರ ಬಿಡುಗಡೆಯಾಗಬೇಕಿತ್ತು ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ ಹೇಳಿದ್ದಾರೆ. ಇನ್ನಿಬ್ಬರು ಮಾಜಿ ಮುಖ್ಯಮಂತ್ರಿಗಳು ಕೂಡ ಬೇಗನೆ ಬಿಡುಗಡೆಯಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾರೈಸಿದ್ದಾರೆ.
ಜೈಲುಗಳಲ್ಲಿ ಕೊಳೆಯುತ್ತಿರುವ ಎಲ್ಲರನ್ನೂ ಬಿಡುಗಡೆ ಮಾಡಬೇಕೆಂದು ಮೆಹಬೂಬಾ ಪುತ್ರಿ ಇಲ್ತಿಜಾ ಮುಫ್ತಿ ಆಗ್ರಹಿಸಿದ್ದಾರೆ.
ಶೆೇಖ್ ಅಬ್ದುಲ್ಲಾ ಕಾಲದ ಕಾನೂನು:ಫಾರೂಕ್ ತಂದೆ ಶೆೇಖ್ ಅಬ್ದುಲ್ಲಾ ಆಡಳಿತಾವಧಿಯಲ್ಲಿ ಕಠಿಣವಾದ ಈ ಕಾನೂನನ್ನು ಜಾರಿಗೊಳಿಸಲಾಗಿದೆ.
VIDEO| ಅಮೆರಿಕ ಚಾನೆಲ್​ ಎಬಿಸಿಗೆ ‘ನಮಸ್ತೆ’ ಪಾಠ ಮಾಡಿದ ಬಾಲಿವುಡ್​ ನಟಿ ರವೀನಾ ಟಂಡನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − two =
Remember me
