ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಮ್ಮಿಕೊಂಡ ಮಹತ್ವದ ಯೋಜನೆ ಚಂದ್ರಯಾನ-3, ವಿಕ್ರಮ್ ಲ್ಯಾಂಡರ್​ನ ಸಾಫ್ಟ್​ ಲ್ಯಾಂಡಿಂಗ್​ನಿಂದ ಭರ್ಜರಿ ಯಶಸ್ಸು ಗಳಿಸಿದೆ. ಇದೇ ಕಾರಣಕ್ಕೆ ಇಸ್ರೋ ಮಾತ್ರವಲ್ಲದೆ ಅಲ್ಲಿನ ವಿಜ್ಞಾನಿಗಳ ಬಗ್ಗೆಯೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಬುಧವಾರ ಸಂಜೆ ವಿಕ್ರಮ್ ಲ್ಯಾಂಡರ್​ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಗುವುದನ್ನು ಇಸ್ರೋ ತನ್ನ ಅಧಿಕೃತ ಯೂಟ್ಯೂಬ್​ ಚಾನೆಲ್​ನಲ್ಲಿ ನೇರಪ್ರಸಾರ ಮಾಡಿತ್ತು. ಈ ಸಂದರ್ಭದಲ್ಲಿ ವಿದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೈವ್​ನಲ್ಲಿ ಹಾಜರಾಗಿ ಯಶಸ್ಸಿಗೆ ಸಾಕ್ಷಿಯಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.ಇಂದು ವಿದೇಶದಿಂದ ಬೆಂಗಳೂರಿನ ಇಸ್ರೋ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಮಾತ್ರವಲ್ಲ, ಈ ಯಶಸ್ಸಿಗೆ ಕಾರಣರಾದ ವಿಜ್ಞಾನಿಗಳನ್ನು ಭೇಟಿಯಾಗಿ ಶ್ಲಾಘಿಸಿದ್ದಾರೆ.
ಇದನ್ನೂ ಓದಿ:ಒಂದೇ ಒಂದು ಲೈವ್​; ಚಂದ್ರನಲ್ಲಿಗೆ ಜಿಗಿಯಿತು ‘ಇಸ್ರೋ’ ಸಬ್​ಸ್ಕ್ರೈಬರ್ಸ್​ ಸಂಖ್ಯೆ
ಅದರಲ್ಲೂ ಈ ಯಶಸ್ಸಿನಲ್ಲಿ ಇಸ್ರೋದ ಮಹಿಳಾ ವಿಜ್ಞಾನಿಗಳ ದೊಡ್ಡ ಬಳಗವೇ ಇದ್ದು, ಅವರನ್ನು ಪ್ರಧಾನಿ ಮೋದಿ ಪ್ರತ್ಯೇಕವಾಗಿ ಭೇಟಿಯಾಗಿ ಮೆಚ್ಚುಗೆ ಸೂಚಿಸಿದ್ದಾರೆ. ‘ನಾನು ಚಂದ್ರಯಾನ-3ರಲ್ಲಿ ಪಾಲ್ಗೊಂಡ ಇಸ್ರೋದ ಮಹಿಳಾ ವಿಜ್ಞಾನಿಗಳನ್ನು ಭೇಟಿಯಾಗಿದ್ದು, ಭಾರತೀಯ ವಿಜ್ಞಾನಕ್ಕೆ ಅವರು ನೀಡಿದ್ದ ಕೊಡುಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದೆ ಮತ್ತು ನಾರಿಶಕ್ತಿ ನಮಿಸಿದೆ’ ಎಂಬುದಾಗಿ ಮೋದಿ ಹೇಳಿಕೊಂಡಿದ್ದಾರೆ.
At@isro, I had the opportunity to meet the women scientists associated with Chandrayaan-3. I bow to our Nari Shakti and applaud their contribution to Indian science.pic.twitter.com/tjIhAbN2A8
— Narendra Modi (@narendramodi)August 26, 2023

ಮತ್ತೆ ಸುದ್ದಿಯಲ್ಲಿ ಇಸ್ರೋದವರ ಸಂಬಳ; ಈ ಸಲ ಬೇರೆಯದೇ ರೀತಿಯಲ್ಲಿ…

ಒಬ್ಬ ಮಗನಿದ್ರೂ ಮತ್ತೆ ಗಂಡು ಮಗುವಾಗಿಲ್ಲ ಅಂತ ಮಕ್ಕಳ ಸಹಿತ ಬಾವಿಗೆ ಹಾರಿದ್ಲು; ಮೂವರು ಮಕ್ಕಳೂ ಸಾವು, ತಾಯಿ ಬಚಾವ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
