ನವದೆಹಲಿ:ನಾನು ಭಾರತದಲ್ಲಿ ಹಣ ದುರುಪಯೋಗ ಮಾಡಿಕೊಂಡು ವಿದೇಶಕ್ಕೆ ಓಡಿ ಬಂದಿಲ್ಲ. ಅನಾರೋಗ್ಯ ಕಾಡುತ್ತಿದ್ದ ಕಾರಣ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ಬಂದಿದ್ದೇನೆ ಎಂದು ಕೆಲವು ವರ್ಷಗಳ ಹಿಂದೆಯೇ ದೇಶದಿಂದ ಪರಾರಿಯಾಗಿರುವ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಹೇಳಿದ್ದಾರೆ. ಡೊಮಿನಿಕಾ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ರೀತಿ ಉಲ್ಲೇಖಿಸಿರುವ ಅವರು, ಭಾರತದ ತನಿಖಾ ಪ್ರಾಧಿಕಾರಗಳು ಯಾವಾಗ ಬೇಕಾದರೂ ನನ್ನನ್ನು ವಿಚಾರಣೆಗೆ ಒಳಪಡಿಸಬಹುದು. ತನಿಖೆ ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
‘‘ತನಿಖಾ ಪ್ರಾಧಿಕಾರಗಳಿಂದ ತಪ್ಪಿಸಿಕೊಂಡು ಓಡಾಡುತ್ತಿಲ್ಲ. ವೈದ್ಯಕೀಯ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೊರಡುವ ಸಂದರ್ಭದಲ್ಲಿ ನನ್ನ ವಿರುದ್ಧ ಬಂಧನದ ವಾರಂಟ್ ಕೂಡ ಇರಲಿಲ್ಲ’’ ಎಂದು ಹೇಳಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,500 ಕೋಟಿ ರೂ. ವಂಚಿಸಿದ ಆರೋಪ ಮೆಹುಲ್ ಚೋಕ್ಸಿ ಮತ್ತು ಅವರ ಸಂಬಂಧಿ ನೀರವ್ ಮೋದಿ ವಿರುದ್ಧ ಇದೆ. ಇವರಿಬ್ಬರೂ 2018ರಲ್ಲಿ ದೇಶದಿಂದ ಪರಾರಿಯಾಗಿದ್ದಾರೆ. ಆ್ಯಂಟಿಗುವಾದಲ್ಲಿದ್ದ ಮೆಹುಲ್ ಎರಡು ವಾರದ ಹಿಂದೆ ಡೊಮಿನಿಕಾಗೆ ಬಂದಿದ್ದರು. ಅಲ್ಲಿ ಅವರನ್ನು ಬಂಧಿಸಲಾಗಿದೆ. ಭಾರತಕ್ಕೆ ಗಡಿಪಾರು ಮಾಡುವ ಬಗ್ಗೆ ವಿಚಾರಣೆ ನಡೆಯುತ್ತಿದೆ.
ಅಡುಗೆ ಮನೆವರೆಗೆ ಹಿಂಬಾಲಿಸಿಕೊಂಡು ಬಂದು ವೃದ್ಧೆಯ ಸರ ಎಗರಿಸಿದ ಕಳ್ಳ!

ಕೊಲೆ ಆರೋಪದ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸ್ ವಶಕ್ಕೆ!; ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
