ಚೆನ್ನೈ:ಧೋನಿ ಅಭಿಮಾನಿಗಳಿಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಪ್ರಸಕ್ತ ಸಾಲಿನ ಐಪಿಎಲ್ ​ಶುರುವಾಗಿನಿಂದಲೂ ಇದು ಧೋನಿಯ ಕೊನೆಯ ಐಪಿಎಲ್ ಎಂಬ ಚರ್ಚೆ ನಡೆಯುತ್ತಲೇ ಇದೆ. ಆದರೆ ಚೆನ್ನೈ ತಂಡದ ನಾಯಕನಿಗೆ ಈ ಕುರಿತು ಹಲವಾರು ಬಾರಿ ಪ್ರಶ್ನೆಗಳನ್ನು ಕೇಳಿದರೂ ಇದರ ಬಗ್ಗೆ ಮಾತನಾಡದೇ ಮೌನವಾಗಿದ್ದರು.
ಇದನ್ನೂ ಓದಿ: VIDEO| ಬೈಕ್‌ ಹಿಂಬದಿ ಕೂತು ಹೆಲ್ಮೆಟ್ ಧರಿಸಿರುವ ನಾಯಿ..!
ಆದರೆ ಸದ್ಯ, ಧೋನಿಯ ನಿವೃತ್ತಿಯ ಮಾತು ಮತ್ತೆ ಮುನ್ನಲೆಗೆ ಬಂದಿದೆ. ನಿನ್ನೆ ಗುಜರಾತ್​ ತಂಡದ ವಿರುದ್ಧ ಪಂದ್ಯದ ಬಳಿಕ ವೇಳೆ ನಿರೂಪಕರು ಧೋನಿಗೆ ನಿವೃತ್ತಿ ಕುರಿತಾದ ಪ್ರಶ್ನೆಯೊಂದನ್ನು ಕೇಳಿದರು. ಆಗ ಧೋನಿ ನೀಡಿದ ಉತ್ತರ ಎಲ್ಲ ಅಭಿಮಾನಿಗಳಿಗೆ ಶಾಕ್​ ನೀಡಿದೆ.
ಪ್ರಶ್ನೆಗೆ ಉತ್ತರಿಸಿದ ಧೋನಿ, ನಿವೃತ್ತಿಯ ಬಗ್ಗೆ ನನಗೆ ಗೊತ್ತಿಲ್ಲ. ಇದರ ಬಗ್ಗೆ ತೀರ್ಮಾನ ಕೈಗೊಳ್ಳಲು ನನ್ನ ಬಳಿ 8-9 ತಿಂಗಳುಗಳಿವೆ. ಈಗ ಅದರ ತಲೆನೋವು ಏಕೆ? ಡಿಸೆಂಬರ್​​ನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ನನಗೆ ಈ ಬಗ್ಗೆ ನಿರ್ಧರಿಸಲು ಸಾಕಷ್ಟು ಸಮಯವಿದೆ. ನಾನು ಯಾವಾಗಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿಯೇ ಇರುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
