ಮುಂಬೈ:ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಹಲವಾರು ಸೆಲೆಬ್ರಿಟಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದ್ದಾರೆ. ಈ ವಿಚಾರವಾಗಿ ಹೆಚ್ಚು ಸದ್ದು ಮಾಡಿದವರು ಎಂದರೆ ಬಾಲಿವುಡ್​ನ ಹಿರಿಯ ನಟಿ ಮಾಧುರಿ ದೀಕ್ಷಿತ್​ ಎಂದೇ ಹೇಳಬಹುದು. ತಮ್ಮ ರಾಜಕೀಯ ಪ್ರವೇಶದ ಕುರಿತು ಮೌನ ಮುರಿದಿರುವ ಧಕ್​ ಧಕ್​ ಗರ್ಲ್​ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ತಮ್ಮ ನಟನೆಯ ಪಂಚಕ್​ ಚಿತ್ರದ ಪ್ರಮೋಶನ್​ನಲ್ಲಿ ಬ್ಯುಸಿ ಇರುವ ನಟಿ ರಾಜಕೀಯದ ಪ್ರವೇಶದ ಕುರಿತು ಆಸಕ್ತಿ ಇಲ್ಲ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ; ಕಾಯ್ದೆ ಜಾರಿ ಮಾಡುವವರೆಗೂ ಎಲ್ಲರೂ ಶಾಂತಿಯುತವಾಗಿರಿ: ಸಿಎಂ ಸಿದ್ದರಾಮಯ್ಯ
ಈ ಕುರಿತು ಮಾತನಾಡಿದ ನಟಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸುತ್ತೇನೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ರಾಜಕೀಯ ನನ್ನ ಫ್ಯಾಷನ್​ ಅಲ್ಲ ನಾನು ನಟಿಸಿರುವ ಪಂಚಕ್​ ಸಿನಿಮಾ ಯಶಸ್ಸು ಕಂಡಲ್ಲಿ ಮತ್ತೊಂದಷ್ಟು ಸಿನಿಮಾಗಳನ್ನು ಮಾಡಲು ನನಗೆ ಪ್ರೇರಣೆ ನೀಡುತ್ತದೆ. ಆದರೆ, ರಾಜಕೀಯ ಪ್ರವೇಶಿಸುವ ಆಲೋಚನೆ ನನ್ನ ತಲೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಮಾಧುರಿ ದೀಕ್ಷಿತ್​ ಅವರು ತಮ್ಮ ಚೊಚ್ಚಲ ನಿರ್ಮಾಣದ ಪಂಚಕ್​ ಸಿನಿಮಾದ ಪ್ರಮೋಶನ್​ನಲ್ಲಿ ತೊಡಗಿಸಿಕೊಂಡಿದ್ದಾರೆ. ಆರ್‌ಎನ್‌ಎಂ ಮೂವಿಂಗ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಜನವರಿ 05, 2024ರಂದು ತೆರೆ ಕಾಣಲಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + 8 =
Remember me
