ಚೆನ್ನೈ:ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಪ್ರತಿದಿನದಂತೆ ಪ್ರಧಾನಿ ಮೋದಿ ಅವರು ಭಗವಾನ್ ರಾಮನ ಸ್ತೋತ್ರವನ್ನು ಟ್ವೀಟ್ ಮಾಡಿದ್ದು, ಇಂದು ಮಂಗಳವಾರ (ಜ.16) ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿದ “ಪೂಜಿಸಲೆಂದೇ ಹೂಗಳ ತಂದೆ…” ಗೀತೆಯ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು. ಪ್ರಧಾನಿ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಂತೆ ದೇಶದೆಲ್ಲೆಡೆ ಈ ವಿಡಿಯೋ ವೈರಲ್ ಆಯಿತು.
ಇದೀಗ ಪ್ರಧಾನಿ ಮೋದಿಯವರಿಂದ ಪ್ರಶಂಸೆ ಪಡೆದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್, “ಇದು ನನಗೆ ತುಂಬಾ ಸಂತೋಷದ ಕ್ಷಣವಾಗಿದೆ … ನಾನು ಈಗ ಅನುಭವಿಸುತ್ತಿರುವ ಭಾವನೆಯನ್ನು ವಿವರಿಸಲು ನನಗೆ ಪದಗಳೇ ಸಿಗುತ್ತಿಲ್ಲ. ಇದು ಗೂಸ್‌ಬಂಪ್ ಕ್ಷಣ. ಇದು ಸ್ವತಃ ಭಗವಾನ್ ರಾಮನ ಆಶೀರ್ವಾದ…” ಎಂದು ಹೇಳಿದ್ದಾರೆ.
Thank you so much sir! 🙏🏻 This is an honour beyond imagination. My pranams to you.
— Sivasri Skandaprasad 🇮🇳 (@ArtSivasri)January 16, 2024

ಪ್ರಧಾನಿ ಮೋದಿಯವರ ಪ್ರಶಂಸೆಗೆ ಪ್ರತಿಕ್ರಿಯಿಸಿದ ಗಾಯಕಿ X ನಲ್ಲಿ, “ತುಂಬಾ ಧನ್ಯವಾದಗಳು ಸರ್! ಇದು ಊಹೆಗೂ ಮೀರಿದ ಗೌರವ. ನಿಮಗೆ ನನ್ನ ಪ್ರಣಾಮಗಳು.” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ ಸಮಾರಂಭ ಜನವರಿ 22 ರಂದು ನಡೆಯಲಿದೆ. ಸಾವಿರಾರು ಗಣ್ಯರು ಹಾಗೂ ಸಮಾಜದ ಎಲ್ಲ ವರ್ಗದ ಜನರು ಪಾಲ್ಗೊಳ್ಳುವ ನಿರೀಕ್ಷೆಯಿರುವ ಈ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಜನವರಿ 22 ರಂದು ನಡೆಯಲಿರುವ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
ಪ್ರಾಣ ಪ್ರತಿಷ್ಠಾ ಪೂರ್ವ ಸಂಸ್ಕಾರಗಳ ಔಪಚಾರಿಕ ಕಾರ್ಯವಿಧಾನಗಳು ಜನವರಿ 16 ರಂದು ಪ್ರಾರಂಭವಾಗುತ್ತವೆ ಮತ್ತು ಜನವರಿ 21 ರವರೆಗೆ ಮುಂದುವರೆಯುತ್ತವೆ. ರಾಮನ ಜನ್ಮಸ್ಥಳವಾದ ಅಯೋಧ್ಯೆಯು ಭಾರತದ ಜನರಿಗೆ ಆಧ್ಯಾತ್ಮಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.
“ಪೂಜಿಸಲೆಂದೇ ಹೂಗಳ ತಂದೆ…”ಹಾಡು ಹಾಡಿ ಮೋದಿಯ ಮೆಚ್ಚುಗೆಗೆ ಪಾತ್ರರಾದ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಯಾರು?


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − six =
Remember me
