ನವದೆಹಲಿ:2024-25ನೇ ಸಾಲಿನ ಮಧ್ಯಂತರ ಬಜೆಟ್​​ಅನ್ನು ಟೀಕಿಸುವ ಭರದಲ್ಲಿ ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಿ ವಿವಾದದ ಕಿಡಿ ಹೊತ್ತಿಸಿರುವ ಸಂಸದ ಡಿ.ಕೆ. ಸುರೇಶ್​ ಅವರ ಹೇಳಿಕೆಯನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶ ಒಡೆಯುವ ಮಾತು ಸಹಿಸಲ್ಲ ಎಂದು ತಮ್ಮದೇ ಪಕ್ಷದ ಸದಸ್ಯ ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.
ರಾಜ್ಯಸಭೆ ಕಲಾಪವನ್ನುಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್​ ಇಂದಿರಾ ಹಾಗೂ ರಾಜೀವ್​ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.
#WATCH| Congress president and LoP Rajya Sabha Mallikarjun Kharge speaks on Congress MP DK Suresh's "…forced to demand a separate country" statement."…If anyone speaks about breaking the country, we will never tolerate it – irrespective of whichever party they belong to.…pic.twitter.com/LuR3cNjXaT
ಇದನ್ನೂ ಓದಿ:ಪಾದಯಾತ್ರೆ ಮೂಲಕ ಅಯೋಧ್ಯೆಗೆ ತೆರಳಿ ಬಾಲರಾಮನಿಗೆ ಭಕ್ತಿ ಸಮರ್ಪಿಸಿದ 350 ಮುಸ್ಲಿಮರು
ದೇಶ ಒಡೆಯುವ ಮಾತು ಸಹಿಸಲ್ಲ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್​ ಇಂದಿರಾ ಹಾಗೂ ರಾಜೀವ್​ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಅದಾಗ್ಯೂ ಸಂಸದ ಡಿ.ಕೆ. ಸುರೇಶ್​ ಆ ಅರ್ಥದಲ್ಲಿ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ಈ ವಿಚಾರವಾಗಿ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ. ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಈ ಬಾರಿಯ ಕೇಂದ್ರ ಬಜೆಟ್​​​ನಲ್ಲಿ ಹೊಸತೇನನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರವು ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ದಕ್ಷಿಣ ಭಾರತದವರು ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಬೇಕಾಗುತ್ತದೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
