ನವದೆಹಲಿ:ಸನಾತನ ಧರ್ಮದ ಕುರಿತು ಡಿಎಂಕೆ ನಾಯಕರು ಸರಣಿ ಹೇಳಿಕೆಗಳನ್ನು ನೀಡುತ್ತಿದ್ದು, I.N.D.I.A ಒಕ್ಕೂಟದ ನಾಯಕರು ಪ್ರತಿಕ್ರಿಯೆ ನೀಡದೆ ಯಾಕೆ ಮೌನ ವಹಿಸಿದ್ದಾರೆ ಎಂದು ಬಿಜೆಪಿ ಪ್ರಶ್ನಿಸಿದೆ.
ಈ ಕುರಿತು ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಮಾಜಿ ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್, ಯಾರೋ ಒಬ್ಬರನ್ನು ಓಲೈಸಿ​ ವೋಟ್​ ಬ್ಯಾಂಕ್​ ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
I.N.D.I.A ಒಕ್ಕೂಟವು ಸನಾತನ ಧರ್ಮ ನಿರ್ಮೂಲನೆಯನ್ನು ತನ್ನ ಪ್ರಮುಖ ಅಜೆಂಡಾವಾಗಿಸಿಕೊಂಡಿದೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಈ ವಿವಾದದ ಬಗ್ಗೆ ಇಲ್ಲಿಯವರೆಗೂ ಮಾತನಾಡದೆ ಮೌನ ವಹಿಸಿದ್ದಾರೆ. ಈ ಕೂಡಲೇ I.N.D.I.A ಒಕ್ಕೂಟದ ನಾಯಕರು ಡಿಎಂಕೆ ಸದಸ್ಯರ ಹೇಳಿಕೆ ಕುರಿತು ತಮ್ಮ ನಿಲುವನ್ನು ತಿಳಿಸಬೇಕು ಎಂದು ಆಗ್ರಹಿಸಿದ್ಧಾರೆ.
K Ponmudi, the Higher Education Minister in the DMK Government told that the INDI Alliance was formed to fight and eradicate the Sanatan Dharma. He is right!He made these remarks at the same conference in which Chief Minister MK Stalin's son Udhayanidhi Stalin had equated…pic.twitter.com/JiLX8JtVai
ಇದನ್ನೂ ಓದಿ:ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಈಗ ಜಾತ್ಯಾತೀತತೆಯನ್ನು ವಿಸರ್ಜಿಸಲು ಹೊರಟಿದ್ದಾರೆ: ರಾಜ್ಯ ಕಾಂಗ್ರೆಸ್​
ಡಿಎಂಕೆ ನಾಯಕರು ಸನಾತನ ಧರ್ಮದಲ್ಲಿ ಜಾತಿ ತಾರತಮ್ಯದ ವಿರುದ್ಧ ತಾವು ಮಾತನಾಡಿದ್ದು, ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್​ನವರು ನಾವು ಧರ್ಮದಲ್ಲಿ ನಂಬಿಕೆ ಇರಿಸಿದ್ದೇವೆ ಎಂದು ಹೇಳುವ ಮೂಲಕ ಅಂತರವನ್ನು ಕಾಯ್ದುಕೊಂಡಿದ್ದಾರೆ. ಆದರೆ, I.N.D.I.A ಒಕ್ಕೂಟದ ಪಕ್ಷಗಳಾದ ಆರ್​ಜೆಡಿ ಹಾಗೂ ಸಮಾಜವಾದಿ ಪಕ್ಷ ಸನಾತನ ಧರ್ಮ ಹಾಗೂ ಹಿಂದೂ ಧರ್ಮಕ್ಕೆ ಸೇರಿದ ಪವಿತ್ರ ಗ್ರಂಥಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಅದೇ ರೀತಿ ಬೇರೆ ಧರ್ಮದ ಬಗ್ಗೆ ಮಾತನಾಡಲು ಇವರಿಗೆ ಧೈರ್ಯ ಇದೆಯಾ ಎಂದು ಪ್ರಶ್ನಿಸಿದ್ದಾರೆ.
ಭಾರತದ ಸಂಸ್ಕೃತಿ ಹಾಗೂ ಪರಂಪರೆಯನ್ನು I.N.D.I.A ಒಕ್ಕೂಟದ ನಾಯಕರು ಪ್ರತಿದಿನ ಅವಮಾನಿಸುತ್ತಿದ್ದಾರೆ. ಸನಾತನ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಪದೇ ಪದೇ ಈ ರೀತಿ ಹೇಳಿಕೆ ನೀಡುತ್ತಿದ್ದಲ್ಲಿ ಮುಂಬರುವ ದಿನಗಳಲ್ಲಿ ಜನತೆ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್​ I.N.D.I.A ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
