ನವದೆಹಲಿ:ಹಲವು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಎಜುಕೇಶನ್​ ಗ್ರೂಪ್​ ಒಂದು 150 ಕೋಟಿ ರೂಪಾಯಿಗೂ ಅಧಿಕ ತೆರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮಿಳುನಾಡಿನ ಕೊಯಮತ್ತೂರು, ಈರೋಡ್, ಚೆನ್ನೈ ಮತ್ತು ನಾಮಕ್ಕಲ್​ ನ 22 ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆ ಸಂಗ್ರಹಿಸಿದ್ದಾರೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಗುರುವಾರ ತಿಳಿಸಿದೆ.
ಹಣಪಾವತಿಯ ವೇಳೆ 150 ಕೋಟಿ ರೂಪಾಯಿಗೂ ಅಧಿಕ ತೆರಿಗೆ ವಂಚನೆ ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳು ಶಿಕ್ಷಣ ಸಂಸ್ಥೆಗಳ ಕಚೇರಿಯಲ್ಲಿ ಪತ್ತೆಯಾಗಿದೆ. ಅಲ್ಲದೆ, 5 ಕೋಟಿ ರೂಪಾಯಿ ನಗದನ್ನೂ ವಶಪಡಿಸಿಕೊಳ್ಳಲಾಗಿದೆ. ಕಂಪ್ಯೂಟರ್ ಮತ್ತು ಇತರೆ ಇಲೆಕ್ಟ್ರಾನಿಕ್ ಉಪಕರಣಗಳನ್ನು ಅಲ್ಲಿಂದ ವಶಪಡಿಸಲಾಗಿದ್ದು, ಅವುಗಳ ಪರಿಶೀಲನೆ ಪ್ರಗತಿಯಲ್ಲಿದೆ.
ಇದನ್ನೂ ಓದಿ:ಚಿನ್ನ ಕಳ್ಳಸಾಗಣೆ ಕೇಸ್​: ಅಮಾನತುಗೊಂಡಿರುವ ಐಎಎಸ್​ ಅಧಿಕಾರಿ ಶಿವಶಂಕರ್ ಇಡಿ ಕಸ್ಟಡಿಗೆ
ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನು ಸರಿಯಾದ ಲೆಕ್ಕಪುಸ್ತಕದಲ್ಲಿ ದಾಖಲಿಸಿಲ್ಲ. ರಾಮನ ಲೆಕ್ಕ, ಕೃಷ್ಣನ ಲೆಕ್ಕ ತೋರಿಸುವುದಕ್ಕೆ ಬೇಕಾದಂತೆ ಹಣ ಸಂಗ್ರಹದ ದಾಖಲೆಗಳನ್ನು ಇರಿಸಿಕೊಂಡಿದ್ದು, ಯಾವುದರಲ್ಲೂ ಸ್ಪಷ್ಟತೆ ಇಲ್ಲ. ಈ ಶಿಕ್ಷಣ ಸಂಸ್ಥೆಯಲ್ಲಿ ಒಬ್ಬ ಸಿವಿಲ್ ಕಾಂಟ್ರಾಕ್ಟರ್​, ಒಬ್ಬ ಆರ್ಕಿಟೆಕ್ಟ್​, ಟೆಕ್ಸ್​ಟೈಲ್ ವ್ಯಾಪಾರಿಗಳು ಸೇರಿ ಹಲವು ಪಾಲುದಾರರಿದ್ದಾರೆ ಎಂದು ಐಟಿ ಇಲಾಖೆ ಮೂಲಗಳು ತಿಳಿಸಿವೆ. (ಏಜೆನ್ಸೀಸ್)
ಬೇರೊಬ್ಬಳೊಡನೆ ಡೇಟಿಂಗ್ ಶುರುಮಾಡಿದ ಪತಿ- ಹತಾಶಳಾದ ಪತ್ನಿ ಬಾಯ್​ಫ್ರೆಂಡ್​ ಮೇಲೆ ಆ್ಯಸಿಡ್ ಸುರಿದ್ಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + two =
Remember me
