ಲಖನೌ​:ವ್ಯಕ್ತಿಯೊಬ್ಬನ ನಿಜವಾದ ಪ್ರೀತಿ, ಹೃದಯವಿದ್ರಾವಕ ಕತೆಗೆ ತಿರುವು ಪಡೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಗಲು-ರಾತ್ರಿಯೆನ್ನದೆ ಕಷ್ಟಪಟ್ಟು ದುಡಿದು ಪತ್ನಿಯನ್ನು ಸಬ್​ ಡಿವಿಷನಲ್​ ಮ್ಯಾಜಿಸ್ಟ್ರೇಟ್​ (ಎಸ್​ಡಿಎಂ) ಮಾಡಿದೆ. ಆದರೆ, ಇಂದು ನನ್ನ ಪತ್ನಿ ಮತ್ತೊಬ್ಬ ಅಧಿಕಾರಿಯ ಜತೆ ಸಂಬಂಧ ಇಟ್ಟುಕೊಳ್ಳುವ ಮೂಲಕ ನನಗೆ ವಂಚನೆ ಮಾಡಿದ್ದಾಳೆ ಎಂದು ಪತಿ ಗಂಭೀರ ಆರೋಪ ಮಾಡಿದ್ದಾರೆ.
ಅಲೋಕ್​ ಮೌರ್ಯ ಎಂಬುವರು ತಮ್ಮ ಪತ್ನಿ ಎಸ್​ಡಿಎಂ ಜ್ಯೋತಿ ಮೌರ್ಯ ವಿರುದ್ಧ ಆರೋಪ ಮಾಡಿದ್ದಾರೆ. ಮದುವೆ ಬಳಿಕ ಇಬ್ಬರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದೆವು. ಆದರೆ, ನಾನು ಬಿಡುವಿಲ್ಲದೆ, ತುಂಬಾ ಶ್ರಮವಹಿಸಿ ದುಡಿದು ಪತ್ನಿಗೆ ಶಿಕ್ಷಣ ಕೊಡಿಸಿದೆ. ಪ್ರಯಾಗ್​ರಾಜ್​ನಲ್ಲಿರುವ ಒಳ್ಳೆಯ ಕೋಚಿಂಗ್​ ಕೇಂದ್ರಕ್ಕೆ ದಾಖಲಿಸಿದೆ. ತನ್ನ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ 2016ರಲ್ಲಿ ಸಬ್​ ಡಿವಿಷನಲ್​ ಮ್ಯಾಜಿಸ್ಟ್ರೇಟ್​ (ಎಸ್​ಡಿಎಂ) ಆಗಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಳು.
ಇದನ್ನೂ ಓದಿ:ಹೊನ್ನಾವರ ಪೊಲೀಸ್ ಠಾಣೆಯಲ್ಲೇ ಸಾವಿಗೆ ಶರಣಾದ ಆರೋಪಿ; ಪಿಐ, ಪಿಎಸ್​ಐ ಸೇರಿ ಐವರು ಅಮಾನತು
ಯಶಸ್ಸನ್ನು ತಲೆಗೆ ತುಂಬಿಸಿಕೊಂಡ ಪತ್ನಿ ನನಗೆ ವಂಚನೆ ಮಾಡಲು ಮುಂದಾದಳು. ಬೇರೆ ಅಧಿಕಾರಿಯ ಜತೆ ಸಂಬಂಧ ಇಟ್ಟುಕೊಂಡಿದ್ದಾರೆ. ಇಬ್ಬರು ಸರಸ ಸಲ್ಲಾಪದಲ್ಲಿ ತೊಡಗಿರುವ ಸಂಗತಿ ಗೊತ್ತಾದ ಬಳಿಕವೂ ಅಲೋಕ್​ ತನ್ನ ವೈವಾಹಿಕ ಸಂಬಂಧವನ್ನು ಉಳಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ, ಜ್ಯೋತಿ, ಗಂಡನ ವಿರುದ್ಧವೇ ಸುಳ್ಳು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಿದ್ದು, ಇದೀಗ ಅಲೋಕ್​ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ ಮತ್ತು ತನ್ನ ಕೆಲಸವನ್ನು ಕಳೆದುಕೊಂಡಿದ್ದಾನೆ. ಇದರಿಂದ ಸಂಕಷ್ಟಕ್ಕಿಡಾಗಿದ್ದು, ಮಾಧ್ಯಮಗಳ ಮುಂದೆ ಅಲೋಕ್​ ಕಣ್ಣೀರಿಟ್ಟಿದ್ದಾರೆ.
ಅಲೋಕ್ ತನ್ನ ಹೆಂಡತಿಯ ಶಿಕ್ಷಣಕ್ಕಾಗಿ ವರ್ಷಗಳ ಕಾಲ ದುಡಿದು ಹಣ ವ್ಯಯಿಸಿ, ಅಂತಿಮವಾಗಿ ಪತ್ನಿಯನ್ನು ಎಸ್‌ಡಿಎಂ ಮಾಡಿದರೂ ಇದೀಗ ತಾನು ನಿರುದ್ಯೋಗಿಯಾಗಿ ಮತ್ತು ಏಕಾಂಗಿಯಾಗಿ ಸಂಪೂರ್ಣ ಅಸಹಾಯಕನಾಗಿದ್ದಾನೆ. ಅಲ್ಲದೆ, ಇದೇ ವೇಳೆ ಪತ್ನಿಗೆ ಸೌಹಾರ್ದಯುತವಾಗಿ ವಿಚ್ಛೇದನ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅಲೋಕ್ ಆರೋಪಿಸಿದ್ದಾರೆ. ಪೊಲೀಸ್ ಇಲಾಖೆ ಮತ್ತು ಆಡಳಿತ ವರ್ಗದ ಬೆಂಬಲದ ಕೊರತೆಯೂ ಇದೆ ಎಂದು ಅಲೋಕ್​ ಆರೋಪಿಸಿದ್ದಾರೆ.(ಏಜೆನ್ಸೀಸ್​)
ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಮದುವೆ? ವೈರಲ್ ವಿಡಿಯೋ ನೋಡಿ ಫ್ಯಾನ್ಸ್​ ಖುಷ್​!

ಮಣಿಪುರ ಹಿಂಸಾಚಾರ: ಸಾವಿರಾರು ಮಹಿಳೆಯರ ಆಕ್ರೋಶಕ್ಕೆ ಮಣಿದು ಸೇನೆಯಿಂದ 12 ಬಂಡುಕೋರರ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twelve =
Remember me
