ಕಲ್ಕತ್ತ; ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತು ವಿಧಾನಸಭೆಯಲ್ಲಿ ನನ್ನ ಧ್ವನಿಯನ್ನು ಎತ್ತುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಅಭಿವೃದ್ಧಿ ವಿಚಾರದಲ್ಲಿ ದೀದಿ ಸರ್ಕಾರದ ಜೊತೆ ಒಟ್ಟಾಗಿ ಕೆಲಸ ಮಾಡುತ್ತೇನೆ. ಆದರೆ, ಚುನಾವಣಾ ಹಿಂಸಾಚಾರದ ಕುರಿತು ಖಂಡಿತವಾಗಿಯೂ ದೀದಿಯನ್ನು ಪ್ರಶ್ನಿಸುತ್ತೇನೆ ಎಂದು ಗುಡುಗಿದ್ದಾರೆ.
ಸಿತಾಲಕುಚಿ ಘಟನೆಗೆ ಸಂಬಂಧಿಸಿದಂತೆ 6 ಜನಕ್ಕೆ ಸಿಐಡಿ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯದಲ್ಲಿ ದೀದಿ ಸರ್ಕಾರ ರಾಜಕೀಯ ಮಾಡುತ್ತಿದೆ. ತಮ್ಮದೇ ಸಿಐಡಿ ಬಳಸಿಕೊಂಡು ತಪ್ಪು ಮಾಡದ ಸಿಐಎಸ್ಎಫ್ ಸಿಬ್ಬಂದಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮೇ 2 ರಂದು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತು. ಇದಾದ ನಂತರ ಆ ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ. ಇನ್ನು ಹಿಂಸಾಚಾರ ಟಿಎಂಸಿ ಪ್ರೇರಿತ. ಇದರಿಂದ9 ಜನ ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಇದನ್ನೂ ಓದಿ
ಸೋಂಕಿತ ಹಿಂದು ವೃದ್ಧೆಯ ಶವಸಂಸ್ಕಾರಕ್ಕೆ ಹಿಂಜರಿದ ಸಂಬಂಧಿಕರು; ಕೊನೆಗೆ ಮುಸ್ಲಿಂ ಯುವಕರಿಂದ ಅಂತಿಮಸಂಸ್ಕಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − eight =
Remember me
