ನವದೆಹಲಿ:ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೇಗಾದರೂ ಮಾಡಿ ಬಿಜೆಪಿಯನ್ನು ಮಣಿಸಿ ಅಧಿಕಾರಕ್ಕೇರಬೇಕೆಂಬ ಹಂಬಲದಲ್ಲಿ ಇಂಡಿಯಾ ಮೈತ್ರಿಕೂಟ ದೇಶಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದೆ. ಇನ್ನೂ ಚುನಾವಣೆ ಪ್ರಚಾರದ ವೇಳೆ ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಭಾಷಣ ಮಾಡುವುದು ಸರ್ವೇ ಸಾಮಾನ್ಯ ಅದೇ ರೀತಿ ಈಗ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಆಡಿರುವ ಮಾತುಗಳು ಎಲ್ಲರ ಗಮನ ಸೆಳೆಯುತ್ತಿದೆ.
ನವದೆಹಲಿಯ ಅಶೋಕ್​ ವಿಹಾರ್​ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್​, ಕಾಂಗ್ರೆಸ್​ ಹಾಗೂ ಆಮ್​ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ.
VIDEO | Lok Sabha Elections 2024: "Our (AAP and Congress) karyakartas have joined hands to save the Constitution. If the Constitution gets abolished, which the BJP and PM Modi want; their top leaders have openly said that they will abolish the Constitution if they get a chance.…pic.twitter.com/jjdFLL2cA9
ಇದನ್ನೂ ಓದಿ:ಚಿನ್ನಸ್ವಾಮಿಯಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ವಿರಾಟ್​​ ಕೊಹ್ಲಿ
ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಒಲವುಳ್ಳ ಉದ್ಯಮಿಗಳೊಂದಿಗಿನ ಲಿಂಕ್​ ಮತ್ತು ಅವರು ಚುನಾವಣಾ ಬಾಂಡ್‌ಗಳನ್ನು ಹೇಗೆ ದುರುಪಯೋಗಪಡಿಸಿಕೊಂಡರು ಎಂಬ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದೆ ನನ್ನ ಜೊತೆ ಚರ್ಚೆಗೆ ಬರಲು ನಿರಾಕರಿಸುತ್ತಿದ್ದಾರೆ. ನಾನು ಈಗಲೂ ಚರ್ಚೆಗೆ ಸಿದ್ದನಾಗಿದ್ದೇನೆ ಈ ಚುನಾವಣೆಯಲ್ಲಿ ನಾನು ಎಎಪಿಗೆ ಮತ ಹಾಕುತ್ತೇನೆ ಮತ್ತು ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಪ್ರಿಯವಾಗಿರುವ ಟಿವಿ ಚಾನೆಲ್​ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಆದರೆ, ಅವರು ನನ್ನೊಂದಿಗೆ ಚರ್ಚೆ ನಡೆಸಲು ಮಾತ್ರ ಸಿದ್ದವಾಗಿಲ್ಲ. ಏಕೆಂದರೆ ಅವರಿಗೆ ನನ್ನ ಪ್ರಶ್ನೆಗಳಿಗೆ ಉತ್ತರಿಸಲು ಭಯವಾಗಿರುವ ಕಾರಣ ಈ ರೀತಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಅದಾನಿ-ಅಂಬಾನಿಯಿಂದ ಟೆಂಪೋ-ಲೋಡ್ ಹಣವನ್ನು ಪಡೆಯುವ ಬಗ್ಗೆ ಪ್ರಧಾನಿ ಮೋದಿ ಮಾತನಾಡುತ್ತಾರೆ, ಆದರೆ ಅವರು ಅದನ್ನು ತನಿಖೆ ಮಾಡಿಸಲು ಮಾತ್ರ ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕಿಡಿಕಾರಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − three =
Remember me
