ಮಹಾರಾಷ್ಟ್ರ:ಮಹಾರಾಷ್ಟ್ರ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ 57 ವರ್ಷದ ಐಎಎಸ್ ಅಧಿಕಾರಿ ದಕ್ಷಿಣ ಮುಂಬೈನ ಹೋಟೆಲ್‌ನಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಐಪಿಎಸ್​ ರೂಪಾ-ಐಎಎಸ್​ ರೋಹಿಣಿ ಜಟಾಪಟಿ ಮತ್ತೊಂದು ಹಂತಕ್ಕೆ: ಇಲ್ಲಿದೆ ಇಂದಿನ ಲೇಟೆಸ್ಟ್ ಬೆಳವಣಿಗೆ
ಅಧಿಕಾರಿಯೊಬ್ಬರ ಪ್ರಕಾರ, ಬುಧವಾರ ರಾತ್ರಿ ಪಿಡಬ್ಲ್ಯೂಡಿ ಕಾರ್ಯದರ್ಶಿ ಪ್ರಶಾಂತ್ ದತ್ತಾತ್ರೇಯ ನವಘರೆ ಕಾಲಾ ಘೋಡಾ ನೆರೆಹೊರೆಯ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ರಾತ್ರಿ ಊಟ ಮಾಡುವಾಗ ಅಧಿಕಾರಿ ನವಘರೆ ಅವರಿಗೆ ಅಲರ್ಜಿಯ ಲಕ್ಷಣಗಳು ಕಂಡುಬಂದಿವೆ.
ಊಟ ಮಾಡುವಾಗ, ತಿಂದ ಆಹಾರದಿಂದಾಗಿ ಅಲರ್ಜಿಯ ಲಕ್ಷಣಗಳನ್ನು ಅನುಭವಿಸಿದ ನವಘರೆ ತಕ್ಷಣವೇ ಪ್ರಜ್ಞೆ ತಪ್ಪಿದ್ದಾರೆ. ಇದಾದ ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಅಲ್ಲಿ ಅವರು ಮೃತಪಟ್ಟಿರುವ ಬಗ್ಗೆ ಘೋಷಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
“ಮಾತಾ ರಮಾಬಾಯಿ ಅಂಬೇಡ್ಕರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಅಪಘಾತ ಸಾವಿನ ವರದಿ (ಎಡಿಆರ್) ದಾಖಲಿಸಲಾಗಿದ್ದು ವ್ಯಕ್ತಿಯ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದರು.(ಏಜೆನ್ಸೀಸ್​)
ಇದನ್ನೂ ಓದಿ:ಸಾರಾ ಮಹೇಶ್​-ರೋಹಿಣಿ ಸಿಂಧೂರಿ ರಾಜಿ ಹಿಂದಿನ ರಹಸ್ಯ ಬಯಲು: ತಪ್ಪನ್ನು ಒಪ್ಪಿಕೊಂಡ ಐಎಎಸ್​ ಅಧಿಕಾರಿ
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 + 3 =
Remember me
