ನವದೆಹಲಿ:ಐಎಎಸ್ ಟಾಪರ್ಸ್​ ದಂಪತಿ ಟೀನಾ ಡಾಬಿ ಮತ್ತು ಅಥರ್​ ಖಾನ್​ ಜೈಪುರ ಕೌಟುಂಬಿಕ ನ್ಯಾಯಾಲಯದಲ್ಲಿ ಶುಕ್ರವಾರ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದಾರೆ.
2015ರ ಬ್ಯಾಚ್​ನ ಐಎಎಸ್​ ಪರೀಕ್ಷೆಯಲ್ಲಿ ಟೀನಾ ಡಾಬಿ ಟಾಪರ್ ಆದರೆ, ಕಾಶ್ಮೀರ ಮೂಲದ ಅಥರ್​​ ಖಾನ್​ ಅವರು ಎರಡನೇ ರ್ಯಾಂಕ್​ ಪಡೆದಿದ್ದರು. ತರಬೇತಿ ಸಮಯದಲ್ಲಿ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರು 2018ರಲ್ಲಿ ವಿವಾಹವಾಗಿದ್ದರು. ಇಬ್ಬರು ಸಹ ರಾಜಸ್ಥಾನ ಕೇಡರ್​ನ ಅಧಿಕಾರಿಗಳಾಗಿದ್ದು, ಜೈಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ:ಕದ್ದ ಮಗು 80 ಸಾವಿರ ರೂ.ಗೆ ಮಾರಾಟ; ಹತ್ತು ದಿನಗಳ ಬಳಿಕ ಆರೋಪಿಗಳ ಸೆರೆ
ಪರಸ್ಪರ ಒಪ್ಪಿಗೆ ಮೇರೆಗೆ ಜೈಪುರದ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಟೀನಾ ಡಾಬಿ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಮುಂದೆ ಖಾನ್ ಎಂಬ​ ಸರ್​ನೇಮ್​ ತೆಗೆದು ಹಾಕಿದಾಗಿನಿಂದ ಇಬ್ಬರ ನಡುವಿನ ವಿವಾಹ ಸಂಬಂಧ ಕುರಿತು ಸಾಕಷ್ಟು ಸುದ್ದಿಯಾಗಿತ್ತು. ಅದೇ ಸಮಯದಲ್ಲಿ ಅಥರ್​ ಸಹ ಇನ್​ಸ್ಟಾಗ್ರಾಂನಲ್ಲಿ ಟೀನಾ ಅವರನ್ನು ಅನ್​ಫಾಲೋ ಮಾಡಿದ್ದು, ಇಬ್ಬರ ನಡುವೆ ಯಾವುದೂ ಸರಿಯಿಲ್ಲ ಎಂಬುದಕ್ಕೆ ಪುಷ್ಠಿ ನೀಡಿತ್ತು.
ಇನ್ನು ಟೀನಾ ಡಾಬಿ ಮತ್ತು ಅಥರ್​ ಖಾನ್​ ಮದುವೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೆಲವರು ದಂಪತಿಗೆ ಶುಭಕೋರಿದರೆ, ಹಿಂದು ಮಹಾಸಭಾ, ಐಎಎಸ್​ ಅಧಿಕಾರಿಗಳಿಬ್ಬರ ಮದುವೆಯನ್ನು ಲವ್​ ಜಿಹಾದ್ ಎಂದು​ ಕರೆದಿದ್ದರು.(ಏಜೆನ್ಸೀಸ್​)
ಗುಡಿಸಲಿನಲ್ಲಿ ವಾಸವಿದ್ದ ಬಡ ಸ್ನೇಹಿತನಿಗೆ ಹೊಸ ಮನೆ ಉಡುಗೊರೆ ನೀಡಿದ ಸ್ಕೂಲ್​ ಫ್ರೆಂಡ್ಸ್​..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − five =
Remember me
