ತಿರುವನಂತಪುರಂ:ಕೇರಳದ ಚರ್ಚ್​ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್​ ಬ್ಲ್ಯಾಸ್ಟ್​ಗೆ ಸಂಬಂಧಿಸಿದಂತೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತ್ತಿದ್ದು, ಸುಧಾರಿತ ಸ್ಫೋಟಕಗಳನ್ನು (IED) ಬಳಸಿ ಕೃತ್ಯ ಎಸಗಲಾಗಿದೆ ಎಂದು ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ತಿಳಿಸಿದ್ದಾರೆ.
ಸಾವಿರಾರು ಕ್ರೈಸ್ತರು ಭಾನುವಾರ ಬೆಳಗ್ಗೆ (ಅಕ್ಟೋಬರ್‌ 29) ಪ್ರಾರ್ಥನೆ ಸಲ್ಲಿಸುವ ವೇಳೆ 9:40ರ ಸುಮಾರಿಗೆ ಟಿಫಿನ್‌ ಬಾಕ್ಸ್‌ನಲ್ಲಿ ಐಇಡಿ ಇಟ್ಟು ಬಾಂಬ್ ಸ್ಫೋಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
#WATCH| Kerala DGP Dr Shaik Darvesh Saheb says "…Preliminary investigation shows it is an IED device and we are investigating it…"pic.twitter.com/CBM2C6asJq
ಇದನ್ನೂ ಓದಿ:ರಾಜ್ಯ ವಿಧಾನಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್, ಸುಧಾರಿತ ಸ್ಫೋಟಕಗಳನ್ನು ಬಳಸಿ ಕೃತ್ಯ ಎಸಗಲಾಗಿದ್ದು, ತನಿಖೆ ಪವರಗತಿಯಲ್ಲಿದೆ. ಮೇಲ್ನೋಟಕ್ಕೆ ಇದು ಉಗ್ರರು ಎಸಗಿರುವ ಕೃತ್ಯ ಎಂದು ಶಂಕಿಸಲಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, 40ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಈ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು, ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
