ಜಲಂಧರ್‌ನ:ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತ-ಪಾಕಿಸ್ತಾನ ಗಡಿಯನ್ನು ತೆರೆಯುವುದಾಗಿ ಪಂಜಾಬ್ ಮಾಜಿ ಸಿಎಂ ಹಾಗೂ ಜಲಂಧರ್​ ಲೋಕಸಭೆ ಕ್ಷೇತ್ರದ ಚರಂಜಿತ್ ಸಿಂಗ್ ಚನ್ನಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಚನ್ನಗಿರಿ ಲಾಕಪ್​ ಡೆತ್​, ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ!
ಜಲಂಧರ್​​ನಲ್ಲಿ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ನಮ್ಮ ಸರ್ಕಾರ ರಚನೆಯಾದ ನಂತರ ನಾವು ಪಂಜಾಬ್‌ನ ವಾಘಾ ಗಡಿಯನ್ನು ತೆರೆಯುತ್ತೇವೆ. ಜೊತೆಗೆ ಜಲಂಧರ್ ಕ್ಷೇತ್ರವನ್ನು ವೈದ್ಯಕೀಯ ಕೇಂದ್ರವಾಗಿ ಅಭಿವೃದ್ಧಿಪಡಿಸುತ್ತೇವೆ. ಇದರಿಂದ ಪಾಕಿಸ್ತಾನ ಜನರು ಚಿಕಿತ್ಸೆಗಾಗಿ ಇಲ್ಲಿಗೆ ಬರಬಹುದು. ಇದರಿಂದ ಪಾಕಿಸ್ತಾನದ ಜನರು ವೈದ್ಯಕೀಯ ಚಿಕಿತ್ಸೆಗಾಗಿ ಪಂಜಾಬ್‌ಗೆ ಬರಲು ಅನುವು ಮಾಡಿಕೊಡುತ್ತದೆ. ಇದು ಜಲಂಧರ್‌ನಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಚರಣ್​ ಸಿಂಗ್​ ಚನ್ನಿ, ಮೋದಿ ಅವರು ನೀಡಿದ ಭರವಸೆಗಳನ್ನು ಈಡೇರಿಸುತ್ತಿಲ್ಲ ಎಂದು ಗುಡುಗಿದರು.
ಭಾರತವು ಭಯೋತ್ಪಾದನೆ ಮತ್ತು ಮಾತುಕತೆಗಳನ್ನು ಮುಂದುವರಿಸಲು ಸಾಧ್ಯವಿಲ್ಲ ಎಂಬ ಸ್ಥಿರವಾದ ನೀತಿಯನ್ನು ಅನುಸರಿಸಿದೆ, ಅಂದರೆ, ಭಾರತದೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ಪುನರಾರಂಭಿಸಲು ಪಾಕಿಸ್ತಾನವು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕಾಗಿದೆ. 2019 ರ ಆಗಸ್ಟ್‌ನಲ್ಲಿ ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ನಂತರ ಭಾರತದಿಂದ ಔಷಧಿಗಳಂತಹ ಅಗತ್ಯ ವಸ್ತುಗಳ ದ್ವಿಪಕ್ಷೀಯ ಆಮದುಗಳನ್ನು ಪಾಕಿಸ್ತಾನವು ಸ್ಥಗಿತಗೊಳಿಸಿತು.
ಪಂಜಾಬ್​​ನ 13 ಸ್ಥಾನಗಳಿಗೆ ಜೂನ್​ 1 ರಂದು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ. ಪಂಜಾಬ್​ನಲ್ಲಿ ಒಟ್ಟು 328 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೊನೆಯ ಹಂತದಲ್ಲಿ ಮತದಾನ ನಡೆಯಲಿರುವ ರಾಜ್ಯದ 13 ಸ್ಥಾನಗಳಿಗೆ ಗುರುದಾಸ್​ಪುರ ಅಮೃತಸರ, ಖದೂರ್​ ಸಾಹಿಬ್​, ಜಲಂಗಧರ್​ ಲೋಕಸಭೆಗಳು ಸೇರಿವೆ.
ಯೂಟ್ಯೂಬರ್ ಧ್ರುವ್‌ ರಾಠೆ ವಿಡಿಯೋ ಬಳಿಕ ಅತ್ಯಾಚಾರ, ಜೀವ ಬೆದರಿಕೆ: ಸ್ವಾತಿ ಮಲಿವಾಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
