ನವದೆಹಲಿ:ಕರೊನಾ ಪಿಡುಗನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ಸರ್ಕಾರ ಮಾಸ್ಕ್​ ಧರಿಸದೇ ಇದ್ದರೆ 10 ಸಾವಿರ ರೂಪಾಯಿ ದಂಡ ವಿಧಿಸಲು ನಿರ್ಧರಿಸಿದೆ.
ಭಾನುವಾರ 9 ಅಂಶಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ಕೇರಳ ಸರ್ಕಾರ ಇನ್ನೊಂದು ವರ್ಷ ಇವುಗಳ ಪಾಲನೆ ಕಡ್ಡಾಯ ಎಂದು ಹೇಳಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್​ ಧರಿಸುವುದು ಕಡ್ಡಾಯವಾಗಿದೆ. ಕೆಲಸದ ಸ್ಥಳಗಳಲ್ಲೂ ಮಾಸ್ಕ್​ ಧರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಂಡು ವೈರಾಣು ಪ್ರಸರಣವಾಗದಂತೆ ಎಚ್ಚರಿಕೆ ವಹಿಸಬೇಕು.ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಧರಿಸದೇ ಇರುವುದು ಕಂಡು ಬಂದರೆ ತಪ್ಪಿತಸ್ಥರಿಗೆ ಸ್ಥಳದಲ್ಲೇ 10 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರು ಮಾತ್ರ ಪಾಲ್ಗೊಳ್ಳಬೇಕು.
ಕೋವಿಡ್​-19ಯೇತರ ರೋಗಿಗಳು ಮೃತಪಟ್ಟಲ್ಲಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಗರಿಷ್ಠ 20 ಜನರಿಗೆ ಮಾತ್ರವೇ ಅವಕಾಶ ಇರಲಿದೆ.
ಇದನ್ನೂ ಓದಿ:ಕೊವಿಡ್​-19 ಸೋಂಕಿತ ವೈದ್ಯೆಯನ್ನು ಸೆರೆಯಲ್ಲಿಟ್ಟ ಆಸ್ಪತ್ರೆ…! ಪೊಲೀಸ್​ ಹೇಳೋದೇನು?
ಸಾಮಾಜಿಕ ಸಭೆ, ಸಮಾರಂಭಗಳನ್ನು ಆಯೋಜಿಸಲು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿಷೇಧಿಸಲಾಗಿದೆ.
ಅನ್ಯ ರಾಜ್ಯಗಳಿಂದ ಕೇರಳಕ್ಕೆ ಬರುವವರು ಕೇರಳ ಸರ್ಕಾರದ ಜಾಗ್ರತಾ ಇ-ಪ್ಲಾಟ್​ಫಾರಂನಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಆದರೆ, ರಾಜ್ಯದೊಳಗೆ ಸುತ್ತಾಡಲು ಯಾವುದೇ ಪಾಸ್​ನ ಅಗತ್ಯ ಇರುವುದಿಲ್ಲ.
ಯಾವುದೇ ಅಂಗಡಿಗಳಲ್ಲಿ ಒಮ್ಮೆಗೆ ಗರಿಷ್ಠ 20 ಜನರಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ದೈಹಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಈ ನಿಯಮವನ್ನು ಜಾರಿಗೊಳಿಸಲಾಗಿದೆ.
ಕರೊನಾ ಸೋಂಕು ಮೊದಲು ಪತ್ತೆಯಾಗಿದ್ದ ಕೇರಳ ರಾಜ್ಯದಲ್ಲಿ. ಸದ್ಯ ಆ ರಾಜ್ಯದಲ್ಲಿ 2,131 ಆ್ಯಕ್ಟೀವ್​ ಕೇಸ್​ಗಳಿದ್ದು, 25 ಜನರು ಮೃತಪಟ್ಟಿರುವುದಾಗಿ ಜುಲೈ 5ರ ಬೆಳಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
VIDEO ] ಕೆಲವೊಮ್ಮೆ ಸಣ್ಣ ಪುಟ್ಟ ಸಂಗತಿಗಳೂ ಅತ್ಯದ್ಭುತ ಆನಂದವನ್ನು ನೀಡುತ್ತವೆ.. ಅಲ್ಲವೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − two =
Remember me
