ನವದೆಹಲಿ:ತಮ್ಮ ವಿರುದ್ಧ ನಡೆಯುತ್ತಿರುವ 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯಲ್ಲಿ ತೀರ್ಪು ಏನೇ ಬಂದರೂ ಅದನ್ನು ಸ್ವೀಕರಿಸಿ ಮುನ್ನೆಡೆಯುವುದಾಗಿ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಹೇಳಿದ್ದಾರೆ.
ತಮ್ಮ ಹೇಳಿಕೆ ದಾಖಲಿಸಲು ಕೋರ್ಟ್​ ನೀಡಿದ್ದ ಸೂಚನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಹಿರಿಯ ನಾಯಕರಾದ ಎಲ್​.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್​ ಜೋಷಿ ಅವರಂತೆ ನನಗೂ ಹೇಳಿಕೆ ದಾಖಲಿಸುವಂತೆ ಸೂಚಿಸಲಾಗಿತ್ತು. ಅದರಂತೆ ನಾನು ಸತ್ಯ ಏನಿದೆಯೋ ಅದನ್ನು ಕೋರ್ಟ್​ಗೆ ತಿಳಿಸಿದ್ದೇನೆ. ತೀರ್ಪು ಏನೇ ಬರಲಿ ಅದನ್ನು ಸ್ವಾಗತಿಸುತ್ತೇನೆ. ನನಗೆ ಮರಣದಂಡನೆ ಶಿಕ್ಷೆಯಾದರೆ ಸಂತೋಷದಿಂದ ನೇಣುಗಂಬ ಏರುತ್ತೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ಜುಲೈ ತಿಂಗಳ ಆರಂಭದಲ್ಲಿ ಉಮಾ ಭಾರತಿ ಅವರು ಲಖನೌನಲ್ಲಿರುವ ಸಿಬಿಐನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಬಿಜೆಪಿಯ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್​ ಮೂಲಕ ಕೋರ್ಟ್​ಗೆ ಹಾಜರಾಗಿದ್ದರೆ, ಮುರಳಿ ಮನೋಹರ್​ ಜೋಷಿ ಅವರು ಗುರುವಾರ ವಿಡಿಯೋ ಕಾನ್ಫರೆನ್ಸ್​ ಮೂಲಕ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು.
ಚೀನಾ ಸೇನೆ ಹಿನ್ನೆಲೆ ಇದ್ದರೂ ಅಮೆರಿಕದಲ್ಲಿ ಸಂಶೋಧನೆ; ಮಾಹಿತಿ ಬಚ್ಚಿಟ್ಟಿದ್ದಕ್ಕೆ ಮೂವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − eleven =
Remember me
