ನವದೆಹಲಿ:ಇಡೀ ದೇಶವೇ ನಾಚಿಕೆಯಿಂದ ತಲೆ ತಗ್ಗಿಸುವಂತಹ ಘಟನೆ ಮಣಿಪುರದಲ್ಲಿ ನಡೆದಿದೆ. ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿದ ದುಷ್ಟರು ರಸ್ತೆಯ ಮೇಲೆ ಮೆರವಣಿಗೆ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್​ ಆದ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪ್ರಧಾನಿ ಮೋದಿ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಇದೀಗ ದೇಶದ ಅತ್ಯುನ್ನತ ನ್ಯಾಯಾಲಯ ಸುಪ್ರೀಂಕೋರ್ಟ್ ಸಹ ಪ್ರತಿಕ್ರಿಯಿಸಿದ್ದು, ಈ ಘಟನೆ ಸಂಪೂರ್ಣ ಸಾಂವಿಧಾನಿಕ ವೈಫಲ್ಯ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಲ್ಲದೆ, ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲು ನಿರ್ದೇಶಿಸಿದ್ದಾರೆ.
ಇದನ್ನೂ ಓದಿ:ಮಣಿಪುರ ವಿಡಿಯೋ ನೋಡಿದ ನಂತರ ನನಗೆ ನಿದ್ರೆ ಬರುತ್ತಿಲ್ಲ: ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್
ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ಸುಪ್ರೀಂಕೋರ್ಟ್​ ತೆಗೆದುಕೊಳ್ಳಬೇಕಾಗುತ್ತದೆ ಎಂದು ಚಂದ್ರಚೂಡ್​ ಅವರು​ ಎಚ್ಚರಿಕೆ ನೀಡಿದ್ದು, ಈ ಪ್ರಕರಣದ ವಿಚಾರಣೆಯನ್ನು ಜುಲೈ 28ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ನಿನ್ನೆ ಹರಿದಾಡಿರುವ ವಿಡಿಯೋ ಬಗ್ಗೆ ನಮಗೆ ತುಂಬಾ ಬೇಸರವಾಗಿದೆ. ನಾವು ನಮ್ಮ ಆಳವಾದ ಕಳವಳವನ್ನು ವ್ಯಕ್ತಪಡಿಸುತ್ತಿದ್ದೇವೆ. ಸರ್ಕಾರ ಕ್ರಮಕೈಗೊಳ್ಳಬೇಕಾದ ಸಮಯ ಬಂದಿದೆ. ನಿಜಕ್ಕೂ ಇದು ಸ್ವೀಕಾರಾರ್ಹವಲ್ಲ. ಸರ್ಕಾರ ಕ್ರಮಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ. ಇಂತಹ ಹಿಂಸಾಚಾರದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಬಂಧಿಸಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಮಾಧ್ಯಮಗಳು ಬಿಂಬಿತವಾಗಿರುವ ದೃಶ್ಯಗಳು ಸಂಪೂರ್ಣ ಸಾಂವಿಧಾನಿಕ ಉಲ್ಲಂಘನೆಯನ್ನು ತೋರಿಸುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್​ ಹೇಳಿದರು.
ನಿನ್ನೆಯಿಂದ ಟ್ವಿಟರ್​ನಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯರಿಬ್ಬರನ್ನು ಮಣಿಪುರದಲ್ಲಿ ಪುರುಷರ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿದೆ. ಅಲ್ಲದೆ, ಮಹಿಳೆಯರ ಮೇಲೆ ಗ್ಯಾಂಗ್​ರೇಪ್​ ಸಹ ನಡೆದಿದೆ ಎನ್ನಲಾಗಿದೆ. ಈ ಘಟನೆ ಮೇ 4ರಂದು ಮಣಿಪುರ ರಾಜಧಾನಿ ಇಂಫಾಲ್​ನಿಂದ 35 ಕಿ.ಮೀ. ದೂರದಲ್ಲಿರುವ ಕೊಂಗ್​ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಪರಿಶಿಷ್ಟ ಪಂಗಡಗಳ (ST) ಸ್ಥಾನಮಾನಕ್ಕಾಗಿ ಮೈತೀಸ್​ ಸಮುದಾಯ ಇಟ್ಟಿರುವ ಬೇಡಿಕೆಯ ಕುರಿತು ಮಣಿಪುರದ ಮೈತೀಸ್​ ಮತ್ತು ಕುಕಿ ಬುಡಕಟ್ಟುಗಳ ನಡುವೆ ಘರ್ಷಣೆಗಳು ಉಂಟಾಗಿರುವ ನಡುವೆಯೇ ಈ ಭಯಾನಕ ಘಟನೆಯೂ ನಡೆದಿದೆ. ಇದೇ ವಿಚಾರಕ್ಕೆ ಮಣಿಪುರ ರಾಜ್ಯ ಅನೇಕ ಸಂಘರ್ಷಗಳಿಗೆ ಕಾರಣವಾಗಿದ್ದು, ಅಲ್ಲಿನ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತೆ ಇದೆ.
ಇದನ್ನೂ ಓದಿ:ಮಣಿಪುರ ಹಿಂಸಾಚಾರ: ಯಾವುದೇ ನಾಗರಿಕ ಸಮಾಜಕ್ಕೆ ಇದು ನಾಚಿಕೆಗೇಡಿನ ಸಂಗತಿ; ಪ್ರಧಾನಿ ಮೋದಿ ಬೇಸರ
ಮಣಿಪುರದ ಹಿಂಸಾಚಾರದಲ್ಲಿ ಈವರೆಗೂ 120 ಮಂದಿ ಅಸುನೀಗಿದ್ದು, ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಿದ್ದು, ಪರಿಹಾರ ಶಿಬಿರಗಳಲ್ಲಿ ಆಶ್ರಯವನ್ನು ಪಡೆದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುವ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ನಿನ್ನೆಯಿಂದ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.
ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ. ನಾವು ಆರೋಪಿಗಳನ್ನು ಗುರುತಿಸಿದ್ದೇವೆ ಮತ್ತು ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಟ್ವಿಟರ್​ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಟ್ವಿಟರ್​ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 20 =
Remember me
