ನವದೆಹಲಿ:ಇತ್ತೀಚಿನ ದಿನಗಳಲ್ಲಿ ಯುವ ಸಮೂಹವು ಮೊಬೈಲ್​ ಗೀಳಿನ ಜೊತೆಗೆ ಮಾದಕವ್ಯಸನಕ್ಕೆ ಹೆಚ್ಚು ಬಲಿಯಾಗುತ್ತಿದ್ದು, ಇದಕ್ಕೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಗಳು ಅನೇಕ ರೀತಿಯ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಹರಿಯಾಣ ಪೊಲೀಸರು ವಿಶೇಷ ಕಾರ್ಯಕ್ರಮ ಒಂದನ್ನು ಆಯೋಜಿಸಿದ್ದರು. ಈ ವೇಳೆ ವಿದ್ಯಾರ್ಥಿ ಒಬ್ಬ ಕೇಳಿದ ಪ್ರಶ್ನೆ ಅಧಿಕಾರಿಗಳ್ನು ನಿಬ್ಬೆರಗಾಗಿಸಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಕಳೆದ ಕೆಲ ದಿನಗಳ ಹಿಂದೆ ಹರಿಯಾಣದ ಸೋನಿಪತ್​ನಲ್ಲಿ ಪೊಲೀಸರು ಡ್ರಗ್ಸ್​ ವಿರೋಧಿ ಅಂದೋಲವನ್ನು ನಡೆಸಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾಲೇಜು ವಿದ್ಯಾರ್ಥಿ ಒಬ್ಬ ಕೇಳಿರುವ ಪ್ರಶ್ನೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
We need more students like him! Proves what a sham the Police arepic.twitter.com/uquI1Wt4dY
ಇದನ್ನೂ ಓದಿ:ಮಹಾಶಿವರಾತ್ರಿಯಂದೇ ಧರ್ಮಸ್ಥಳದ ಹಿರಿಯ ಆನೆ ಲತಾ ಸಾವು
ವೈರಲ್​ ಆಗಿರುವ ವಿಡಿಯೋದಲ್ಲಿ ಇತ್ತೀಚಿನ ದಿನಗಳಲ್ಲಿ ಪೊಲೀಸರು ಮಾದಕದ್ರವ್ಯ ವಿರುದ್ಧದ ದೊಡ್ಡ ಕಾರ್ಯಕ್ರಮವನ್ನು ನೋಡಿದ್ದೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಾಂಜಾ ಸೇರಿದಂತೆ ಅನೇಕ ಮಾದಕ ವಸ್ತುಗಳು ಅಂಗಡಿಯಲ್ಲಿ ಮಿಠಾಯಿ ಅಥವಾ ಲಾಲಿಪಾಪ್​ನಷ್ಟು ಸುಲಭವಾಗಿ ದೊರೆಯುತ್ತಿದೆ. ಸಾಮಾನ್ಯ ಜನರಿಗೆ ಒಬ್ಬ ಡ್ರಗ್​ ಡೀಲರ್​ ಪತ್ತೆ ಹಚ್ಚುವುದು ಅಷ್ಟು ಸುಲಭದ ಕೆಲಸ ಆಗುತ್ತದೆ. ಆದರೆ, ಪೊಲೀಸರಿಗೆ ಮಾತ್ರ ಅವರನ್ನು ಯಾಕೆ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಪೊಲೀಸ್​ ಠಾಣೆಯ ಮುಂಭಾಗವೇ ಗಾಂಜಾ ಮಾರಾಟ ಮಾಡುತ್ತಿದ್ದಾರೆ. ಆದರೆ, ಇದರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾನೆ.
ವಿದ್ಯಾರ್ಥಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಆತ ಪ್ರಶ್ನಿಸಿರುವ ರೀತಿಯನ್ನು ಹಲವರು ಪ್ರಶಂಶಿಸಿದ್ದಾರೆ. ಕೊನೆಗೂಇದರ ಬಗ್ಗೆ ಯಾರೋ ಧ್ವ ನಿ ಎತ್ತಿದ್ದರು ಎಂದು ಹೇಳಿದರೆ. ಇನ್ನೂ ಕೆಲವರು ಇಂತಹ ವಿದ್ಯಾರ್ಥಿಗಳಿಗೆ ಪೊಲೀಸರ ಬಳಿ ಹೇಗೆ ಮಾತನಾಡಬೇಕು ಎಂಬುದನ್ನು ಕಾಲೇಜುಗಳಲ್ಲಿ ಹೇಳಿಕೊಟ್ಟಿಲ್ಲ ಎಂದು ಕಾಣುತ್ತದೆ. ಒಂದು ವೇಳೆ ಆತ ಈ ರೀತಿಯ ಕಾನೂನುಬಾಹಿರ ಚಟುವಟಿಕೆಗಳನ್ನು ಕಂಡಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಅವರಿಗೆ ಸಹಾಯ ಮಾಡುತ್ತಿದ್ದ ಅದರ ಬದಲಾಗಿ ಬಹಿರಂಗ ವೇದಿಕೆಯಲ್ಲಿ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹಲವರು ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 12 =
Remember me
