ನವದೆಹಲಿ:ಗಡಿಗಳಲ್ಲಿ ಪಾಕಿಸ್ತಾನ ಮತ್ತು ಚೀನಾ ಎರಡೂ ರಾಷ್ಟ್ರಗಳು ಭಾರತದ ವಿರುದ್ಧ ಕಾಲ್ಕೆರೆದು ಜಗಳಕ್ಕೆ ಬರುತ್ತಿವೆ. ಎಲ್​​ಒಸಿ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದ್ದರೆ..ಅತ್ತ ಎಲ್​ಎಸಿ ಬಳಿ ಚೀನಾ ಕ್ಯಾತೆ ಮುಂದುವರಿದೆ. ಭಾರತ-ಚೀನಾ ನಡುವೆ ಉನ್ನತ ಮಟ್ಟದ ಮಾತುಕತೆಯ ನಂತರವೂ ಗಡಿಯಲ್ಲಿ ಉದ್ವಿಘ್ನತೆ ಎಳ್ಳಷ್ಟೂ ಕಡಿಮೆಯಾಗಿಲ್ಲ.
ಹೀಗಿರುವಾಗ ಈ ವಿಚಾರವನ್ನು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದ ಮಾಜಿ ಕೇಂದ್ರ ಸಚಿವ, ಜಮ್ಮುಕಾಶ್ಮೀರ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ, ಚೀನಾದೊಂದಿಗೆ ಉಂಟಾಗಿರುವ ಭಿನ್ನಮತವನ್ನು ಮಾತುಕತೆ ಮೂಲಕ ಬಗೆಹರಿಸಲು ಪ್ರಯತ್ನ ಮಾಡುವಂತೆ, ಪಾಕಿಸ್ತಾನದೊಂದಿಗೂ ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದ್ದಾರೆ.
ಕಳೆದ ಆಗಸ್ಟ್​​ನಲ್ಲಿ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದಾಗಿನಿಂದಲೂ ಗೃಹಬಂಧನದಲ್ಲಿದ್ದ ಫಾರೂಕ್​ ಇಂದು ಮಾತನಾಡಿ, ಗಡಿಗಳಲ್ಲಿ ಸಂಘರ್ಷ ಹೆಚ್ಚುತ್ತಿದೆ. ಸಾವುನೋವಿನ ಪ್ರಮಾಣವೂ ಅಧಿಕವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲೇಬೇಕು. ಚೀನಾದೊಂದಿಗೆ ಮಾತುಕತೆ ನಡೆಸುತ್ತಿರುವಂತೆ ಮತ್ತೊಂದು ನೆರೆರಾಷ್ಟ್ರದೊಂದಿಗೂ ಮಾತುಕತೆಗೆ ಮುಂದಾಗಬೇಕು ಎಂದಿದ್ದಾರೆ.
ಹಾಗೇ ಶೋಪಿಯಾನಾ ಎನ್​ಕೌಂಟರ್​​ನಲ್ಲಿ ಮೂವರು ಮುಗ್ಧರನ್ನು ಕೊಂದಿದ್ದಾಗಿ ಭಾರತೀಯ ಸೇನೆ ಒಪ್ಪಿಕೊಂಡ ಬಗ್ಗೆ ಖುಷಿಯಿದೆ. ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ. (ಏಜೆನ್ಸೀಸ್​)
ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗೆ ಪಾಕ್​ ಪ್ರಚೋದನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
