ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರು ಇಂದು ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಆದರೆ ಅವರ ಕಾರ್ಯಕ್ರಮಕ್ಕೂ ಕೆಲ ಹೊತ್ತು ಮೊದಲೇ ಟ್ವಿಟ್ಟರ್​ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿಗೆ ಸವಾಲೊಂದನ್ನು ಹಾಕಿದ್ದಾರೆ.
ನಿಮಗೆ ಧೈರ್ಯವಿದ್ದರೆ ಮನ್​ ಕಿ ಬಾತ್​ ಬದಲು ಕಿಸಾನ್​ ಬಾತ್​ ಮತ್ತು ಜಾಬ್​ ಕಿ ಬಾತ್​ ಕಾರ್ಯಕ್ರಮ ಮಾಡಿ ಅದರ ಬಗ್ಗೆ ಮಾತನಾಡಿ ಎಂದು ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಹೇಳಿದ್ದಾರೆ. ಕೇಂದ್ರದಲ್ಲಿ ವಿರೋಧಿ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್​ ತನ್ನ ಸಾಮಾಜಿಕ ಜಾಲತಾಣಗಳ ಮೂಲಕ ಆಡಳಿತ ಪಕ್ಷವನ್ನು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಲಾರಂಭಿಸಿದೆ.
ಈ ಹಿಂದೆ ರೈತ ಹೋರಾಟದ ಕುರಿತಾಗಿಯೂ ರಾಹುಲ್​ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದರು. ಇದೀಗ ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಹೆಚ್ಚುತ್ತಿರುವ ನಿರೋದ್ಯೋಗ ಸಮಸ್ಯೆಯ ಬಗ್ಗೆ ಕಾಂಗ್ರೆಸ್​ ನಾಯಕರು ಕೇಂದ್ರವನ್ನು ಪ್ರಶ್ನೆ ಕೇಳಲಾರಂಭಿಸಿದ್ದಾರೆ. (ಏಜೆನ್ಸೀಸ್​)
हिम्मत है तो करो-#KisanKiBaat#JobKiBaat
— Rahul Gandhi (@RahulGandhi)February 28, 2021

ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

‘ಉತ್ತರ ಪ್ರದೇಶದಲ್ಲಿ 350 ಸೀಟು ಗೆದ್ದೇ ಗೆಲ್ಲುತ್ತೇವೆ’

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:17 + 2 =
Remember me
