ಕೋಲ್ಕತ್ತಾ:ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್‌ ನೀಡಿದರೆ ಅದನ್ನು ನಿರ್ಲಕ್ಷಿಸಿ ಎಂದು ರಾಜಭವನ ಸಿಬ್ಬಂದಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ಹುಷಾರ್​, ಹಾಸನದ ಲೈಂಗಿಕ ಕಿರುಕುಳ ವಿಡಿಯೋ ಶೇರ್​ ಮಾಡದಿರಿ.. ಎಸ್‌ಐಟಿ ಹೇಳುತ್ತಿರುವುದೇನು?
ಈ ಬಗ್ಗೆ ಆನಂದ್‌ ಬೋಸ್ ಅವರು ತಮ್ಮ ಸಿಬ್ಬಂದಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ತಮ್ಮ ಅಧಿಕಾರಾವಧಿಯಲ್ಲಿ ರಾಜಭವನ ಸಿಬ್ಬಂದಿ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಹೂಡಲು ಬರುವುದಿಲ್ಲ. ಪ್ರಕರಣದ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದು, ಅವರು ರಾಜಭವನದ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿಯಾಗಿದೆ. ಆದರೆ ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ತನಿಖಾ ತಂಡವು ರಾಜಭವನದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಉದ್ದೇಶಿಸಿದೆ ಎಂದು ವರದಿಯಾಗಿದೆ.
ರಾಜಭವನ ಸಿಬ್ಬಂದಿಯೊಬ್ಬರು ರಾಜ್ಯಪಾಲರು ಉದ್ಯೋಗ ಭಡ್ತಿ ಸಂಬಂಧ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಪೊಲೀಸರಿಗೆ ಇತ್ತೀಚೆಗೆ ದೂರು ನೀಡಿದ್ದರು.
ನಿಜ್ಜಾರ್ ಹತ್ಯೆ ಪ್ರಕರಣದ ಬಂಧಿತರಿಗಿದೆ ಗ್ಯಾಂಗ್​ಗಳ ಸಂಪರ್ಕ: ಜೈಶಂಕರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
