ವಂಢೀಗಡ:ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಹಿಸ್ಸಾರ್​ನಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಿಮಾಂಶು ಎಂದು ತಿಳಿದು ಬಂದಿದೆ. ಮೃತರನ್ನು ಪ್ರತಿಮಾ ದೇವಿ ಎಂದು ಗುರುತಿಸಲಾಗಿದ್ದು, ಆರೋಪಿ ಇವರ ಮೃತದೇಹವನ್ನು ಪ್ರಯಾಗ್​ರಾಜ್​ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಎಸೆಯಲು ಯತ್ನಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಹಿಮಾಂಶು ಐಐಟಿ ಆಕಾಂಕ್ಷಿಯಾಗಿದ್ದು, ತನ್ನ ತಾಯಿಯೊಂದಿಗೆ ಹರಿಯಾಣದ ಹಿಸ್ಸಾರ್​ನಲ್ಲಿ ನೆಲೆಸಿದ್ದ. ಆರೋಪಿ ತನ್ನ ತಾಯಿಯ ಬಳಿ 5 ಸಾವಿರ ರೂಪಾಯಿ ಹಣ ಕೇಳಿದ್ದು, ಇದಕ್ಕೆ ಅವರ ತಾಯಿ ಒಪ್ಪಿಲ್ಲ. ಬಳಿಕ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆತ ಸಿಟ್ಟಿನಲ್ಲಿ ಅವರನ್ನು ಹತ್ಯೆ ಮಾಡಿದ್ದಾನೆ.
5 हजार रुपए नहीं देने पर बेटे हिमांशु ने मां प्रतिमा देवी को गला दबाकर मार डाला लाश सूटकेस में पैक की और संगम नदी (प्रयागराज) में प्रवाहित करने पहुंच गया पुलिस ने गिरफ्तार कियाहरियाणा के हिसार में मर्डर किया फिर लाश को ट्रेन से गाजियाबाद लाया यहां से प्रयागराज ले गया हिसार से…pic.twitter.com/jxSIp46ksY
ಇದನ್ನೂ ಓದಿ:ಎಂ.ಎಸ್.ಧೋನಿ ಬಗ್ಗೆ ಅಪಪ್ರಚಾರ; ನಿವೃತ್ತ ಐಪಿಎಸ್​ ಅಧಿಕಾರಿಗೆ ಜೈಲುಶಿಕ್ಷೆ
ಹತ್ಯೆ ಮಾಡಿದ ಬಳಿಕ ಆತ ತನ್ನ ತಾಯಿಯ ಮೃತದೇಹವನ್ನು ಸೂಟ್​ಕೇಸ್​ ಒಂದರಲ್ಲಿ ಪ್ಯಾಕ್​ ಮಾಡಿದ್ದು, ಉತ್ತರಪ್ರದೇಶದ ಪ್ರಯಾಗ್​ರಾಜ್​ಗೆ ಪ್ರಯಾಣ ಬೆಳೆಸಿದ್ದಾನೆ. ಬಳಿಕ ತ್ರಿವೇಣಿ ಸಂಗಮದಲ್ಲಿ ಆರೋಪಿ ಶವವನ್ನು ಮುಳುಗಿಸಲು ಯತ್ನಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಶಂಕೆಯ ಮೇರೆಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸೂಟ್​ಕೇಸ್​ನಲ್ಲಿ ಮೃತದೇಹ ಪತ್ತೆಯಾಗಿದ್ದು, ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 16 =
Remember me
