ದೆಹಲಿ:ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) 2023ರ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಭಾನುವಾರ ಪ್ರಕಟಿಸಿದೆ.ಇದನ್ನೂ ಓದಿ:ಬಿಸಿಲಿನ ಬೇಗೆಯಿಂದಾಗಿ 24 ಗಂಟೆಗಳಲ್ಲಿ 34 ಜನರು ಆಸ್ಪತ್ರೆಯಲ್ಲೇ ಸಾವುಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್​ಸೈಟ್​ನಲ್ಲಿ ಪರೀಕ್ಷಿಸಬಹುದಾಗಿದೆ. ಈ ವರ್ಷ ಒಟ್ಟು 1,89,744 ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪರೀಕ್ಷೆಯನ್ನು ಜೂನ್ 4ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಪೇಪರ್ 1 ಹಾಗೂ ಮಧ್ಯಾಹ್ನ 2:30ರಿಂದ ಸಂಜೆ 5:30ರವರೆಗೆ ಪೇಪರ್ 2 ಪರೀಕ್ಷೆಯನ್ನು ನಡೆಸಲಾಗಿತ್ತು. ಹೈದರಾಬಾದಿನ ವಾವಿಲಾಲ ಚಿದ್ವಿಲಾಸ್ ರೆಡ್ಡಿ 341 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.
ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು:ಜೆಇಇ-ಅಡ್ವಾನ್ಸ್ಡ್ 2023ರ ಫಲಿತಾಂಶ ನೋಡಲು ಅಧಿಕೃತ ವೆಬ್‌ಸೈಟ್‌ jeeadv.ac.inಗೆ ಭೇಟಿ ನೀಡಿ. ಮುಖಪುಟದಲ್ಲಿ 2023ರ ಜೆಇಇ-ಅಡ್ವಾನ್ಸ್ಡ್ ಫಲಿತಾಂಶದ ಲಿಂಕ್​ ಮೇಲೆ ಕ್ಲಿಕ್​ ಮಾಡಿ. ಜನ್ಮ ದಿನಾಂಕ ಮತ್ತು ಪರೀಕ್ಷಾ ನೋಂದಣಿ ಸಂಖ್ಯೆ ಮತ್ತು ಮೊಬೈಲ್​ ಸಂಖ್ಯೆ ನಮೂದಿಸಿ ಲಾಗಿನ್ ಮಾಡಿದರೆ ನಿಮ್ಮ ಫಲಿತಾಂಶ ನೋಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜೆಇಇ-ಅಡ್ವಾನ್ಸ್ಡ್ ವೆಬ್​ಸೈಟ್​​ ಪರೀಕ್ಷಿಸಬಹುದಾಗಿದೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
