ಕಾನ್ಪುರ:ಪ್ರಾಧ್ಯಾಪಕರೊಬ್ಬರು ಉಪನ್ಯಾಸ ನೀಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಐಐಟಿ ಕಾನ್ಪುರದಲ್ಲಿ ನಡೆದಿದೆ. ಹಳೇ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮೃತರು ಸಮೀರ್ ಖಂಡೇಕರ್ (53) ಎಂದು ತಿಳಿದು ಬಂದಿದ್ದು, ಇವರು ಐಐಟಿ ಕಾನ್ಪುರದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಮಾತ್ರೆಯಿಂದ ಬಟ್ಟೆ ಕಲೆ ಮಾಯ; ನಿನ್​ ಟ್ಯಾಲೆಂಟ್​ ಮೆಚ್ಚಲೇಬೇಕಮ್ಮ ಎಂದ ನೆಟ್ಟಿಗರು
ಈ ಕುರಿತು ಪ್ರತಿಕ್ರಿಯಿಸಿರುವ ವೈದ್ಯರೊಬ್ಬರು, ಹಳೆಯ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
ಐದು ವರ್ಷಗಳ ಹಿಂದೆ ಖಂಡೇಕರ್ ಅವರಿಗೆ ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿರುವುದು ಪತ್ತೆಯಾಗಿತ್ತು. ಅದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ. ಇತ್ತೀಚಿನ ಅವರ ಆರೋಗ್ಯದ ಸ್ಥಿತಿಗತಿ ಪರಿಶೀಲಿಸಿದಾಗ ಅವರು ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + 12 =
Remember me
