ಚೆನ್ನೈ:ಮದ್ರಾಸ್​ ಐಐಟಿಯಲ್ಲಿ ಕರೋನಾ ಪ್ರಕರಣ ಮತ್ತಷ್ಟು ಹೆಚ್ಚಳವಾಗಿದ್ದು, ಶುಕ್ರವಾರ ಬರೋಬ್ಬರಿ 30 ಪ್ರಕರಣಗಳು ಪತ್ತೆಯಾಗಿವೆ.
ಗುರುವಾರ 9 ವಿದ್ಯಾರ್ಥಿಗಳಲ್ಲಿ ಕರೊನಾ ದೃಢವಾಗಿತ್ತು. ಇದೀಗ ಇದರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಐಐಟಿ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಸಿಬ್ಬಂದಿ ಸೇರಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೊಳಪಡಿಸಬೇಕೆಂದು ಆಡಳಿತ ಮಂಡಳಿ ಸೂಚಿಸಿದೆ. ಸದ್ಯ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿಗಳನ್ನು ಐಸೋಲೇಟೆಡ್​ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಮ್ಮು,ನೆಗಡಿ ಹಾಗೂ ಜ್ವರ ಇರುವ ವಿದ್ಯಾರ್ಥಿಗಳನ್ನು ಏಪ್ರಿಲ್​ 19 ರಂದು ಪರೀಕ್ಷೆಗೊಳಪಡಿಸಲಾಗಿತ್ತು.ಈ ಪೈಕಿ 9 ಮಂದಿಗೆ ಸೋಂಕು ದೃಢವಾಗಿತ್ತು.
ಸೋಂಕಿತರ ಸಂಪರ್ಕಕ್ಕೆ ಬಂದ 21 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ತಮಿಳುನಾಡಿನಾದ್ಯಂತ ಗುರುವಾರ 39 ಕರೊನಾ ಪ್ರಕರಣಗಳು ಪತ್ತೆಯಾಗಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + eighteen =
Remember me
