ಕೋಲ್ಕತ್ತಾ:ರಾಜಭವನದಲ್ಲಿ ಭದ್ರತೆ ಇಲ್ಲ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಅವರು ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. ತಮ್ಮ ಕಚೇರಿಯು ಸಂಪೂರ್ಣ ಪಶ್ಚಿಮ ಬಂಗಾಳ ಪೊಲೀಸ್​ ಸಿಬ್ಬಂದಿಯನ್ನು ಹೊಂದಿರುವುದೇ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ರೀಲ್ಸ್​ಗೆ ಮರುಳಿದ ನಿವೇದಿತಾಗೌಡ.. ಏನಾದ್ರೂ ಮಾಡ್ಕೋ ತಾಯಿ ಶೆಡ್‌ ಸಹವಾಸ ಬೇಡಪ್ಪಾ ಎಂದ್ರು ನೆಟ್ಟಿಗರು!
ರಾಜಭವನ ಆವರಣವನ್ನು ಖಾಲಿ ಮಾಡುವಂತೆ ಪೊಲೀಸ್ ಸಿಬ್ಬಂದಿಗೆ ಆದೇಶ ನೀಡಿದ ಕೆಲವು ದಿನಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಆದರೆ ಪೊಲೀಸ್ ಸಿಬ್ಬಂದಿಗೆ ಆದೇಶ ನೀಡಿದರೂ ರಾಜಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪ್ರಸ್ತುತ ಪ್ರಭಾರಿ ಅಧಿಕಾರಿ ಮತ್ತು ಅವರ ತಂಡ ಇರುವುದರಿಂದ ನನ್ನ ವೈಯಕ್ತಿಕ ಸುರಕ್ಷತೆಗೆ ಧಕ್ಕೆ ಉಂಟಾಗಿದೆ. ಈ ಕುರಿತು ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತಿಳಿಸಿದ್ದೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಬೋಸ್ ಬೇಸರ ವ್ಯಕ್ತಪಡಿಸಿದರು.
ರಾಜಭವನದಲ್ಲಿರುವ ಪೊಲೀಸ್ ಸಿಬ್ಬಂದಿ ತನ್ನ ಮೇಲೆ ನಿರಂತರವಾಗಿ ಕಣ್ಣಿಟ್ಟಿದ್ದಾರೆ ಎಂದು ಬೋಸ್ ರಾಜ್ಯ ಸರ್ಕಾರಕ್ಕೆ ದೂರಿದ್ದರು. ಕೆಲವರ ಪ್ರಭಾವಕ್ಕೆ ಒಳಗಾಗಿ ಪೊಲೀಸ್ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಆರೋಪಿಸಿದ್ದಾರೆ. ಅವರನ್ನು ತೆಗೆದು ಹಾಕಿ ಹೊಸಬರನ್ನು ನೇಮಿಸುವಂತೆ ಅವರು ಮನವಿ ಮಾಡಿದ್ದಾರೆ.
‘ನೀವು ನೀವಾಗಿರಿ..ಇನ್ನೊಬ್ಬರಿಗಾಗಿ ಬದಲಾಗುವುದು ಬೇಡ’: ಪ್ರಿಯಾಂಕಾ ಚೋಪ್ರಾ ಹೀಗೆನ್ನಲು ಕಾರಣವಿದೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
