ಹೈದರಾಬಾದ್:ದೇಶದ ಹಲವು ಭಾಗಗಳಲ್ಲಿ ಬೇಸಿಗೆಯ ಕಾವು ತೀವ್ರವಾಗಿದ್ದು, ಜನರು ಮನೆಯಿಂದ ಹೊರಬರಲು ಚಿಂತೆಗೀಡಾಗಿದ್ದಾರೆ. ಬಿರು ಬಿಸಿಲ ತಾಪ ವ್ಯಾಪಕವಾಗಿ ಆವರಿಸಿಕೊಳ್ಳುತ್ತಿದ್ದಂತೆ ಇದೀಗ ಕೆಲವೆಡೆ ವರ್ಷದ ಮೊದಲ ಮಳೆಯಾಗುತ್ತಿದೆ. ಕರ್ನಾಟಕ, ತಮಿಳುನಾಡಿನಲ್ಲಿ ಈಗಾಗಲೇ ಒಂದು ಸುತ್ತು ಮಳೆ ಸುರಿದಿದೆ. ತೆಲಂಗಾಣದಲ್ಲಿ ಸಹ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:ಅವಕಾಶ ಕೊಡಿ ಅಂದ್ರೆ ಬಟ್ಟೆ ಬಿಚ್ಚು, ಮಚ್ಚೆ ಇದ್ಯಾ… ಚಿತ್ರರಂಗದ ಕರಾಳ ಸತ್ಯ ಬಿಚ್ಚಿಟ್ಟ ನಟಿ ಆಮನಿ!
ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿರುವ ಐಎಂಡಿ, ತೆಲಂಗಾಣದಲ್ಲಿ ಇಂದು ಬೆಳಗ್ಗೆಯಿಂದಲೇ ಕಾರ್ಮೋಡ ವಾತಾವರಣವಿರಲಿದೆ ಎಂದು ತಿಳಿಸಿದೆ. ಹೈದರಾಬಾದ್‌ನಲ್ಲಿ ಬುಧವಾರದವರೆಗೆ ಮೋಡ ಕವಿದ ವಾತಾವರಣವಿದ್ದು, ಜೋರು ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ. ಇಂದು ಮುಂಜಾನೆ ನಗರದಲ್ಲಿ ಮಳೆಯ ಪ್ರಮಾಣ ದಾಖಲಾಗಿದ್ದು, ಬೇಸಿಗೆಯ ಬೇಗೆಯಿಂದ ತತ್ತರಿಸಿರುವ ನಿವಾಸಿಗಳಿಗೆ ನೆಮ್ಮದಿ ತಂದಂತಾಗಿದೆ.
ವರದಿ ಪ್ರಕಾರ, ನಗರದಲ್ಲಿ ಇಂದು ಎಲ್ಲಾ ಆರು ವಲಯಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ತೆಲಂಗಾಣಕ್ಕೆ ಈಗಾಗಲೇ ಮುನ್ಸೂಚನೆ ಸಿಕ್ಕಿದ್ದು, ರಾಜ್ಯದಲ್ಲಿ ಗುಡುಗು, ಮಿಂಚು, ಚಂಡಮಾರುತ ಮತ್ತು ಆಲಿಕಲ್ಲು ಮಳೆ ಸುರಿಯಲಿದೆ ಎಂದು ಐಎಂಡಿ ತಿಳಿಸಿದೆ,(ಏಜೆನ್ಸೀಸ್).
ಅವಕಾಶ ಕೊಡಿ ಅಂದ್ರೆ ಬಟ್ಟೆ ಬಿಚ್ಚು, ಮಚ್ಚೆ ಇದ್ಯಾ… ಚಿತ್ರರಂಗದ ಕರಾಳ ಸತ್ಯ ಬಿಚ್ಚಿಟ್ಟ ನಟಿ ಆಮನಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 10 =
Remember me
