ನವದೆಹಲಿ:ಭಾರೀ ಮಳೆಯಿಂದಾಗಿ ಕೇರಳದ ಹಲವಾರು ಪ್ರದೇಶಗಳಲ್ಲಿ ಜಲಾವೃತ ಮತ್ತು ಪ್ರವಾಹದ ಪರಿಸ್ಥಿತಿಗಳು ನಿರ್ಮಾಣಗೊಂಡ ಬೆನ್ನಲ್ಲೇ ಇದೀಗ ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ತಿರುವನಂತಪುರಂ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಅನ್ನು ಘೋಷಿಸಿದೆ.
ಇದನ್ನೂ ಓದಿ:‘ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್’ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಕ್ಟೋಬರ್ 15 ರಂದು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು, ಕಣ್ಣೂರು ಮತ್ತು ಕಾಸರಗೋಡು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂನಲ್ಲಿ ನಿರಂತರ ಮಳೆಯಿಂದಾಗಿ ರಾಜ್ಯದ ದಕ್ಷಿಣದ ಜಿಲ್ಲೆಯ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಕರಮಾನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ವೆಳ್ಳಾಯಣಿ ಕೆರೆಯ ನೀರಿನ ಮಟ್ಟ ಕೂಡ ಹೆಚ್ಚಾಗಿದೆ. ಅಕ್ಕಪಕ್ಕದ ಸುಮಾರು 100 ಮನೆಗಳು ಜಲಾವೃತವಾಗಿದ್ದು, ನೂರಾರು ಎಕರೆ ಜಮೀನಿನಲ್ಲಿದ್ದ ಬೆಳೆಗಳು ನೀರಿನಲ್ಲಿ ಮುಳುಗಡೆಯಾಗಿವೆ.
ಇದನ್ನೂ ಓದಿ:ಗರ್ಭಕಂಠದ ಕ್ಯಾನ್ಸರ್​​​​ನಿಂದ 26ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್
ಮಳೆ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರ ನೆರವಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಪರಿಹಾರ ಕಾರ್ಯಗಳು ನಡೆಯುತ್ತಿವೆ ಎಂದು ತಿರುವನಂತಪುರ ಜಿಲ್ಲಾಧಿಕಾರಿ ಜೆರೊಮಿಕ್ ಜಾರ್ಜ್ ತಿಳಿಸಿದ್ದಾರೆ,(ಏಜೆನ್ಸೀಸ್).
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್​ ಬಿ; ರಿಲೀಸ್​ ಡೇಟ್​ನಲ್ಲಿ ಮತ್ತೊಮ್ಮೆ ಬದಲಾವಣೆ?​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + fourteen =
Remember me
