ಹೊಸದಿಲ್ಲಿ:ಇಂದಿನಿಂದ ಫೆಬ್ರವರಿ 21ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಭಾರೀ ಮಳೆ/ಹಿಮಪಾತ ಸಾಧ್ಯತೆ ಹೆಚ್ಚಿದ್ದು, ಕೆಲವು ರಾಜ್ಯಗಳಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇದೀಗ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:ಪತಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತ್ನಿ! ಎಗ್​ ರೋಲ್​ನಲ್ಲಿ ಬಯಲಾಯ್ತು ಅಸಲಿ ಸಂಗತಿ
ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ಗುಡ್ಡಗಾಡು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಹಿಮಪಾತ ಮತ್ತು ಮಳೆಯಾಗಲಿದ್ದು, ಪಶ್ಚಿಮ ಹಿಮಾಲಯ ಪ್ರದೇಶದಲ್ಲಿನ ಹವಾಮಾನದಲ್ಲಿನ ಬದಲಾವಣೆ ಇರಲಿದೆ ಎಂದು ಹೇಳಲಾಗಿದೆ.
ಇಂದು ಜಮ್ಮು ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 20ರವರೆಗೆ ಆಲಿಕಲ್ಲು ಬೀಳುವ ಸಾಧ್ಯತೆ ಇದೆ. ಇದರೊಟ್ಟಿಗೆ ಫೆಬ್ರವರಿ 21ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೇಲೆ ಪ್ರತ್ಯೇಕವಾದ ಲಘು/ಮಧ್ಯಮ ಮಳೆ ಬೀಳುವ ಮುನ್ಸೂಚನೆ ಇದೆ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:IND vs ENG: ಟೀ ಬ್ರೇಕ್​ ನಡುವೆ ಯಶಸ್ವಿ, ಸರ್ಫರಾಜ್ ಖಾನ್ ಗೊಂದಲ! ಏನಾಯಿತು? ವಾಪಾಸ್ ಏಕೆ? ಎಂದ ಹಿಟ್ ಮ್ಯಾನ್​
ಇಂದು ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಹವಾಮಾನ ಇಲಾಖೆಯು ಸೋಮವಾರ (ಫೆ.19) ರಾಷ್ಟ್ರ ರಾಜಧಾನಿಯಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆ, ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮಂಗಳವಾರ, ಬುಧವಾರ ಸಾಧಾರಣ ಅಥವಾ ತುಂತುರು ಮಳೆಯ ಮುನ್ಸೂಚನೆಯಿದೆ ಎಂದು ತಿಳಿಸಿದೆ,(ಏಜೆನ್ಸೀಸ್).
ಇದನ್ನೂ ಓದಿ:ನಿತ್ಯಭವಿಷ್ಯ: ಈ ರಾಶಿಯವರಿಗಿಂದು ಆಸ್ತಿ ಸಮಸ್ಯೆಗಳು ಬಗೆಹರಿಯುವುದು
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twenty − 6 =
Remember me
