ನವದೆಹಲಿ:ದೇಶದ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸುವ ಮುಖೇನ ಎಚ್ಚರಿಕೆಯನ್ನು ನೀಡಿದೆ.
ಇದನ್ನೂ ಓದಿ:ಟ್ರಾಫಿಕ್ ಕಿರಿ ಕಿರಿ; ಕಚೇರಿಗೆ ಹೋಗುವವರು ಸ್ವಂತ ಕಾರು ಬಳಸಬಾರದು ಎಂದ ಸೈಬರಾಬಾದ್ ಪೊಲೀಸರು
ದೆಹಲಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ನೋಯ್ಡಾ, ಗುರುಗ್ರಾಮ್, ಲಕ್ನೋ ಮತ್ತು ಇತರ ನಗರಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಐಎಂಡಿ (Indian Metrological Department) ಇಂದಿನ ವರದಿಯಲ್ಲಿ ಉಲ್ಲೇಖಿಸಿದೆ. ಮುಂದಿನ 5-6 ದಿನಗಳಲ್ಲಿ ಮಧ್ಯಂತರ ತುಂತುರು ಮಳೆಯಾಗುವ ಮುನ್ಸೂಚನೆಯಿದ್ದರೂ, ತೀವ್ರತೆಯು ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಉತ್ತರಪ್ರದೇಶದ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿ 4 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಲಕ್ನೋದಲ್ಲಿಯೂ ಕೂಡ ಅಧಿಕ ಮಳೆಯನ್ನು ನಿರೀಕ್ಷಿಸಲಾಗಿದೆ. ಈ ಹಿಂದೆ ಮುಂಬೈ ಮಹಾನಗರಕ್ಕೆ ಹವಾಮಾನ ಇಲಾಖೆ ‘ರೆಡ್’ ಅಲರ್ಟ್ ಘೋಷಣೆ ಮಾಡಿತ್ತು. ನಿರಂತರ ಮಳೆಯ ಹಿನ್ನಲೆ ಬೃಹತ್​ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಇದೀಗ ಗುರುವಾರ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಿದೆ.
ಇದನ್ನೂ ಓದಿ:ಮಳೆಗಾಲದಲ್ಲಿ ಆರೋಗ್ಯ ರಕ್ಷಣೆ ಹೇಗೆ ಎನ್ನುವ ಚಿಂತೆ ಇದ್ಯಾ? ಇಂತಿವೆ ಕೆಲವು ಸಲಹೆ, ಮುನ್ನೆಚ್ಚರಿಕೆಗಳು…
ಮಧ್ಯ ಮಹಾರಾಷ್ಟ್ರ ಸೇರಿದಂತೆ ಹಿಮಾಚಲ ಪ್ರದೇಶ, ಪೂರ್ವ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಕೊಂಕಣ-ಗೋವಾ, ದಕ್ಷಿಣ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ,(ಏಜೆನ್ಸೀಸ್).
ಪವನ್​ ಕಲ್ಯಾಣ್​ ಫ್ಯಾನ್ಸ್​ಗೆ ಕೈಮುಗಿದು ಮನವಿ ಮಾಡಿದ ಸಾಯಿ ಧರಮ್ ತೇಜ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + eighteen =
Remember me
