ನವದೆಹಲಿ:ಈ ವರ್ಷಾಂತ್ಯಕ್ಕೆ ನಡೆಯುವ ಬಿಹಾರ ವಿಧಾನಸಭೆ ಚುನಾವಣೆ ಹಾಗೂ ಈ ಸಮಯದಲ್ಲಿ ನಡೆಯುವ ಉಪ ಚುನಾವಣೆಗಳಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಭಾರತೀಯ ಚುನಾವಣೆ ಆಯೋಗ ಶುಕ್ರವಾರ ಪ್ರಕಟಿಸಿದೆ. ಚುನಾವಣೆ ಪ್ರಚಾರ ವೇಳೆ ಅನುಸರಿಸಬೇಕಾದ ನಿಯಮಗಳನ್ನೂ ಪ್ರಕಟಿಸಲಾಗಿದೆ. ಚುನಾವಣೆ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗುವ ಪ್ರತಿಯೊಬ್ಬರೂ ಮುಖಗವಸು (ಮಾಸ್ಕ್) ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಸೋಂಕಿತರ ಮತದಾನ ಹೇಗೆ?
ಕೋವಿಡ್-19 ಸೋಂಕಿತರು ಹಾಗೂ ಕ್ವಾರಂಟೈನ್​ನಲ್ಲಿ ಇರುವ ಮತದಾರರಿಗೆ ಸಂಬಂಧಪಟ್ಟ ಮತಗಟ್ಟೆಯಲ್ಲಿ ದಿನದ ಕೊನೆ ಹಂತದಲ್ಲಿ ಮತ ಚಲಾಯಿಸಲು ಅವಕಾಶ ನೀಡಲಾಗುತ್ತದೆ.
ಗರಿಷ್ಠ 1000 ಮತದಾರರು
ಇದುವರೆಗಿನ ಚುನಾವಣೆಗಳಲ್ಲಿ ಒಂದು ಮತಗಟ್ಟೆಯಲ್ಲಿ ಗರಿಷ್ಠ 1500 ಮತದಾರರಿಗೆ ಅವಕಾಶ ನೀಡಲಾಗುತ್ತಿತ್ತು. ಈಗ ಅದನ್ನು 1000ಕ್ಕೆ ಮಿತಿಗೊಳಿಸಲಾಗಿದೆ. ಮತದಾನದ ಮುನ್ನಾದಿನ ಮತಗಟ್ಟೆಗಳನ್ನು ನಿರ್ಮಲೀಕರಿಸಲಾಗುತ್ತದೆ.
ನಿಯಮಗಳು ಹೀಗಿವೆ
ಆನ್​ಲೈನ್ ನಾಮಪತ್ರ
ಜನರು ಗುಂಪು ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಅಭ್ಯರ್ಥಿಗಳಿಗೆ ಆನ್​ಲೈನ್ ಮೂಲಕ ನಾಮಪತ್ರ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕವೇ ಠೇವಣಿ ಹಣ ಸಂದಾಯ ಮಾಡಲು ಅನುಕೂಲ ಕಲ್ಪಿಸಲಾಗುತ್ತದೆ. ಕೋವಿಡ್-19 ಹರಡುವುದನ್ನು ತಡೆಯಲು ಗೃಹ ಸಚಿವಾಲಯ ಹೊರಡಿಸಿರುವ ನಿಯಮಗಳಿಗೆ ಅನುಗುಣವಾಗಿ ಸಾರ್ವಜನಿಕ ಸಭೆ ಹಾಗೂ ರೋಡ್ ಷೋ ನಡೆಸಲು ಅವಕಾಶ ನೀಡಲಾಗುವುದೆಂದು ಆಯೋಗ ಸ್ಪಷ್ಟಪಡಿಸಿದೆ. ಮನೆ-ಮನೆ ಪ್ರಚಾರದಲ್ಲಿ ಅಭ್ಯರ್ಥಿ ಸಹಿತ ಐದು ಜನರು ಮಾತ್ರ ಭಾಗವಹಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
