ನವದೆಹಲಿ:ದೇಶದಲ್ಲೇ ಗರಿಷ್ಠ ಕರೊನಾ ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿರುವ ದೆಹಲಿಯಲ್ಲಿ ಲಾಕ್​ಡೌನ್​ ವಿಸ್ತರಿಸದಿರಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ಮಹಾರಾಷ್ಟ್ರ ಸರ್ಕಾರ ಲಾಕ್​ಡೌನ್​ ಅನ್ನು ಮರುಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ದೆಹಲಿಯಲ್ಲಿ 34,600ಕ್ಕೂ ಹೆಚ್ಚು ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೂ ರಾಜ್ಯದಲ್ಲಿ ಲಾಕ್​ಡೌನ್​ ಅನ್ನು ವಿಸ್ತರಿಸುವುದಿಲ್ಲ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ಹೇಳಿದ್ದಾರೆ.
ದೇಶದ ಇತರೆ ಭಾಗಗಳಂತೆ ದೆಹಲಿ ಸರ್ಕಾರ ಕೂಡ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅನ್​ಲಾಕ್​ 1.0 ಅನ್ನು ಜಾರಿಗೊಳಿಸಿದೆ. ಮಾಲ್​ಗಳು, ಸಲೂನ್​ಗಳು ಮತ್ತು ಧಾರ್ಮಿಕ ಕೇಂದ್ರಗಳು ಸೇರಿ ಎಲ್ಲವನ್ನೂ ಸಾರ್ವಜನಿಕ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ.ದೆಹಲಿ ಸರ್ಕಾರ ಬಿಡುಗಡೆ ಮಾಡಿರುವ ಇದುವರೆಗಿನ ಕರೊನಾ ಸೋಂಕಿತರ ಕುರಿತ ಬುಲೆಟಿನ್​ನಲ್ಲಿ 34,687 ಸೋಂಕಿತರು ಇದ್ದು, 1,085 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ಒದಗಿಸಿದೆ.
ಇದನ್ನೂ ಓದಿ:ನೇಪಾಳ ಗಡಿಯಲ್ಲಿ ಭಾರತೀಯರ ಮೇಲೆ ಗುಂಡಿನ ದಾಳಿ, ಒಬ್ಬನ ಸಾವು
ಮರುಜಾರಿ ಇಲ್ಲ:ಮಹಾರಾಷ್ಟ್ರದಲ್ಲಿ ಈಗಾಗಲೆ ಅನ್​ಲಾಕ್​ 1.0 ಜಾರಿಗೊಳಿಸಲಾಗಿದೆ. ರಾಜ್ಯಾದ್ಯಂತ ಕರೊನಾ ಸೋಂಕಿತರ ಸಂಖ್ಯೆಯ ದಿನೇದಿನೆ ಹೆಚ್ಚಾಗುತ್ತಿದೆ. ಆದರು ರಾಜ್ಯದಲ್ಲಿ ಲಾಕ್​ಡೌನ್​ ಅನ್ನು ಮರುಜಾರಿಗೊಳಿಸುವುದಿಲ್ಲ ಎಂದು ಸಿಎಂ ಉದ್ಧವ್​ ಠಾಕ್ರೆ ಅವರ ಕಚೇರಿಯ ಮೂಲಗಳು ಟ್ವೀಟ್​ನಲ್ಲಿ ಸ್ಪಷ್ಟಪಡಿಸಿವೆ.
ಲಾಕ್​ಡೌನ್​ ಮರುಜಾರಿಗೊಳಿಸುವುದಿಲ್ಲ. ಆದರೆ, ಅನ್​ಲಾಕ್​ 1.0 ಅವಧಿಯಲ್ಲಿ ಪಾಲಿಸುವಂತೆ ಸೂಚಿಸಿ ಬಿಡುಗಡೆ ಮಾಡಲಾಗಿರುವ ಮಾರ್ಗಸೂಚಿಯನ್ನು ಎಲ್ಲರೂ ಚಾಚೂತಪ್ಪದೆ ಪಾಲಿಸುವುದು ಕಡ್ಡಾಯವಾಗಿದೆ. ದೈಹಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ಹರಡದಂತೆ ಎಚ್ಚರವಹಿಸಬೇಕು ಎಂದು ಸೂಚನೆಯನ್ನೂ ನೀಡಿದೆ.
ಶುಕ್ರವಾರದ ಬುಲೆಟಿನ್​ ಪ್ರಕಾರ ಮಹಾರಾಷ್ಟ್ರದಲ್ಲಿ ರಾಷ್ಟ್ರದಲ್ಲೇ ಗರಿಷ್ಠ 97 ಸಾವಿರ ಕರೊನಾ ಸೋಂಕಿತರು ಇದ್ದು, 3,590 ಮಂದಿ ಮೃತಪಟ್ಟಿದ್ದಾರೆ.
ಕೋಕಾಕೋಲಾ ಬ್ಯಾನ್​ ಮಾಡಿ ಎಂದವನಿಗೆ 5 ಲಕ್ಷ ದಂಡ ವಿಧಿಸಿದ ಸುಪ್ರೀಂಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
