ನವದೆಹಲಿ:ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದ್ದು, ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಸಿಕ್ಕಂತಾಗಿದೆ. ಬಿಡುಗಡೆಗೊಂಡ ನಾವಿಕರು ಇರಾನ್‌ನಿಂದ ನಿರ್ಗಮಿಸಿದ್ದಾರೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಏಪ್ರಿಲ್​ 13ರಂದು ಇಸ್ರೇಲ್-ಸಂಬಂಧಿತ ಸರಕು ಹಡಗನ್ನು ಇರಾನ್​ ವಶಪಡಿಸಿಕೊಂಡಿತ್ತು. ಅದರಲ್ಲಿ 17 ಭಾರತೀಯರು ಇದ್ದರು. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಬಳಿ ಕಂಟೈನರ್ ಹಡಗನ್ನು ವಶಪಡಿಸಿಕೊಂಡಿತ್ತು.
17 ಭಾರತೀಯ ಸಿಬ್ಬಂದಿಯಲ್ಲಿ ಒಬ್ಬರಾದ ಕೇರಳದ ತ್ರಿಶೂರ್‌ನ ಆನ್ ಟೆಸ್ಸಾ ಜೋಸೆಫ್ ಏ.18 ರಂದು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದರು. ಇತರರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಒಪ್ಪಂದದ ಜವಾಬ್ದಾರಿಗಳನ್ನು ಪೂರೈಸಿದ ನಂತರ ಉಳಿದವರನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
