ನವದೆಹಲಿ:ದೇಶದಲ್ಲಿ ಒಟ್ಟಾರೆ ಕರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆಯಾದರೂ ಕೆಲ ರಾಜ್ಯಗಳಲ್ಲಿ ಸೋಂಕು ಏರಿಕೆ ಕಾಣುತ್ತಿದೆ. ದೆಹಲಿ, ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಕರೊನಾ ಹೊಸ ಅಲೆ ಏಳುತ್ತಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ದೇಶದಲ್ಲಿ ಮಂಗಳವಾರ ಶೇ. 4.1 ವರದಿಯಾಗಿದ್ದ ಪಾಸಿಟಿವಿಟಿ ಪ್ರಮಾಣ ಬುಧವಾರಕ್ಕೆ ಶೇ. 4.6ಕ್ಕೆ ಏರಿದೆ. ಹಿಂದಿನ ದಿನಕ್ಕೆ ಹೋಲಿಸಿದರೆ ಸೋಂಕಿನ ಪ್ರಮಾಣ ಶೇ. 14 ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈಗಾಗಲೇ ಎರಡು ಅಲೆಗಳನ್ನು ಕಂಡಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನದಲ್ಲಿ 5 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಮೂರನೇ ಅಲೆ ಆರಂಭವಾಗಿರುವ ಸಾಧ್ಯತೆಯಿದೆ. ಆದರೆ ಒಂದು ದಿನದ ವರದಿ ಆಧರಿಸಿ ಅದನ್ನು ಹೇಳಲಾಗುವುದಿಲ್ಲ. ಕೆಲ ದಿನಗಳ ನಂತರ ಮೂರನೇ ಅಲೆಯ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ಕೇರಳದಲ್ಲಿ 8,800 ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ. ಸೋಂಕನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದ ರಾಜ್ಯದಲ್ಲಿ ಓಣಂ ಹಬ್ಬದ ಆಚರಣೆ ನಂತರ ಸೋಂಕಿತರ ಸಂಖ್ಯೆ ಗಣನೀಯ ಏರಿಕೆ ಕಾಣಲಾರಂಭಿಸಿದೆ. ಪಶ್ಚಿಮ ಬಂಗಾಳದಲ್ಲಿ 4 ಸಾವಿರ ಪ್ರಕರಣ ದೃಢವಾಗಿದೆ. ದುರ್ಗಾ ಪೂಜೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡ ಕಾರಣ ಸೋಂಕು ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗಿದೆ.
ಜಾಗತಿಕವಾಗಿಯೂ ಸೋಂಕಿನ ಪ್ರಮಾಣ ಅತಿ ವೇಗದಲ್ಲಿ ಹೆಚ್ಚುತ್ತಿದೆ. ಬುಧವಾರ ವಿಶ್ವದಲ್ಲಿ 5 ಲಕ್ಷಕ್ಕೂ ಅಧಿಕ ಪ್ರಕರಣಗಳು ದೃಢವಾಗಿವೆ. ಸೋಂಕು ಆರಂಭವಾದಾಗಿನಿಂದ ಈವರೆಗಿನ ಏಕದಿನ ಏರಿಕೆಯಲ್ಲಿ ಇದು ಗರಿಷ್ಠ ದಾಖಲೆಯಾಗಿದೆ. ಯುರೋಪ್ ದೇಶಗಳಲ್ಲೇ 2.45 ಲಕ್ಷಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಮೆರಿಕದಲ್ಲಿ 81 ಸಾವಿರ ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 91.2 ಲಕ್ಷಕ್ಕೂ ಅಧಿಕವಾಗಿದೆ. 30 ಲಕ್ಷದಷ್ಟು ಸಕ್ರಿಯ ಪ್ರಕರಣಗಳು ಬಾಕಿಯಿವೆ. ಸೋಂಕಿತರ ಸಂಖ್ಯೆ ಏರುತ್ತಲೇ ಇರುವ ಹಿನ್ನೆಲೆಯಲ್ಲಿ ಕೆಲದಿನಗಳಲ್ಲಿ ದೇಶದಲ್ಲಿನ ಸೋಂಕಿತರ ಸಂಖ್ಯೆ 1 ಕೋಟಿ ದಾಟುವ ಸಾಧ್ಯತೆಯಿದೆ.
ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬರುತ್ತಿದ್ದು, ಬುಧವಾರ ಇದು ಆರು ಲಕ್ಷಕ್ಕೆ ಇಳಿದಿದೆ. 50 ಸಾವಿರ ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, 56,500 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 80.40 ಲಕ್ಷ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 73.16 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಮೃತರ ಸಂಖ್ಯೆ 1.205 ಲಕ್ಷಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ ಒಂಬತ್ತು ದಿನಗಳಲ್ಲಿ ಒಂದು ಕೋಟಿಗೂ ಅಧಿಕ ಜನರಿಗೆ ಕರೊನಾ ಪರೀಕ್ಷೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕಳೆದ ಆರು ವಾರಗಳಿಂದ ಪ್ರತಿದಿನ ಸರಾಸರಿ 11 ಲಕ್ಷ ಜನರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಒಂದೇ ದಿನ 15 ಲಕ್ಷ ಜನರಿಗೆ ಪರೀಕ್ಷೆ ಮಾಡುವ ಸಾಮರ್ಥ್ಯ ನಮ್ಮಲ್ಲಿದೆ ಎಂದು ಸಚಿವಾಲಯ ತಿಳಿಸಿದೆ. 16 ಕೋಟಿ ಜನರಿಗೆ ಕರೊನಾ ಪರೀಕ್ಷೆ ಮಾಡುವ ಮೂಲಕ ಚೀನಾ ಪರೀಕ್ಷೆ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿರುವ ಅಮೆರಿಕದಲ್ಲಿ 14 ಕೋಟಿ ಜನರಿಗೆ ಹಾಗೂ ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ 10.54 ಕೋಟಿ ಜನರಿಗೆ ಪರೀಕ್ಷೆ ಮಾಡಲಾಗಿದೆ.
ಫ್ರಾನ್ಸ್​ನಲ್ಲಿ ಕರೊನಾ ಸೋಂಕಿತರ ಸಂಖ್ಯೆ ಗಣನೀಯ ಏರಿಕೆ ಕಾಣುತ್ತಿರುವ ಹಿನ್ನೆಲೆ ಮತ್ತೊಮ್ಮೆ ಲಾಕ್​ಡೌನ್ ಹೇರಿಕೆ ಮಾಡಲಾಗಿದೆ. ಡಿಸೆಂಬರ್ 1ರವರೆಗೂ ಕಠಿಣ ನಿರ್ಬಂಧಗಳು ಜಾರಿಯಲ್ಲಿರುವುದಾಗಿ ಹೇಳಲಾಗಿದೆ. ದೇಶದಲ್ಲಿ ಈಗಾಗಲೇ 3 ಸಾವಿರಕ್ಕೂ ಅಧಿಕ ಸೋಂಕಿತರು ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನವೆಂಬರ್ ಮಧ್ಯಕ್ಕೆ ಇದು 9 ಸಾವಿರಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ. ಲಾಕ್​ಡೌನ್ ಹೇರಿಕೆ ಮಾಡದಿದ್ದರೆ, ವೈದ್ಯಕೀಯ ನೆರವು ಕಷ್ಟವಾಗುತ್ತದೆ ಎಂದು ಅಲ್ಲಿನ ಸರ್ಕಾರ ಹೇಳಿಕೊಂಡಿದೆ. ದೇಶದಲ್ಲಿ ಪ್ರತಿದಿನ 30 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಫ್ರಾನ್ಸ್​ನಲ್ಲಿ ಇದುವರೆಗೆ 12.35 ಲಕ್ಷ ಪ್ರಕರಣ ಪತ್ತೆಯಾಗಿವೆ.ಜರ್ಮನಿಯಲ್ಲೂ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಲಾಕ್​ಡೌನ್ ಘೋಷಿಸಲಾಗಿದೆ. ದೇಶದಲ್ಲಿ ಪ್ರತಿದಿನ 16 ಸಾವಿರದಷ್ಟು ಸೋಂಕು ಕಾಣಿಸಿಕೊಳ್ಳುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
