ಬಿಹಾರ್​:‘ಭಾರತ್​ ತೇರೆ ತುಕ್​ಡೇ ಹೋಂಗೆ’ ಸ್ಲೋಗನ್​ಗೆ ಜೆಎನ್​ಯುನಲ್ಲಿ ಇನ್ನು ಅವಕಾಶವಿಲ್ಲ. ಇನ್ನೇನಿದ್ದರೂ ‘ಏಕ್​ ಭಾರತ್ ಶ್ರೇಷ್ಠ್​ ಭಾರತ್’ ಎಂಬುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುಡುಗಿದ್ದಾರೆ. ಬಿಹಾರದ ಕರಾಕಟ್ ವಿಧಾನಸಭಾ ಚುನಾವಣೆಯ ಸಾರ್ವಜನಿಕ ರ‍್ಯಾಲಿಯಲ್ಲಿ ಅವರು ಈ ವಿಷಯ ಹೇಳಿದರು.
ಹಾಗೇ ಪಾಕಿಸ್ತಾನ ಬೆಂಬಲಿತ ಉಗ್ರರು ಇನ್ನು ಕಾಶ್ಮೀರಕ್ಕೆ ಪ್ರವೇಶಿಸುವಂತಿಲ್ಲ. ಏಕೆಂದರೆ, ಒಂದು ವೇಳೆ ಅವರು ಭಾರತಕ್ಕೆ ಬಂದರೆ ನಮ್ಮ ಸೈನಿಕರು ಪಾಕಿಸ್ತಾನಕ್ಕೇ ನುಗ್ಗಿ ಉಗ್ರರನ್ನು ಸದೆಬಡಿಯುತ್ತಾರೆ ಎಂದು ಯೋಗಿ ಹೇಳಿದರು.
ಇಲ್ಲಿ ನೀವು ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದರೆ ಅವರು ಶಾಸಕರಾಗುತ್ತಾರೆ. ಬಳಿಕ ಅವರು ನಿಮ್ಮನ್ನು ಅಯೋಧ್ಯೆಯ ರಾಮಮಂದಿರಕ್ಕೆ ಕರೆದೊಯ್ದು ರಾಮನ ದರ್ಶನ ಮಾಡಿಸುತ್ತಾರೆ. ಆದ್ದರಿಂದ ಎಲ್ಲರೂ ಬಿಹಾರದ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟದ ಅಭ್ಯರ್ಥಿಗಳಿಗೇ ಮತ ಚಲಾಯಿಸಬೇಕು ಎಂದು ಅವರು ಕೋರಿದರು.
ಅಕ್ಟೋಬರ್ 28, ನವೆಂಬರ್ 3 ಮತ್ತು 7ರಂದು ಒಟ್ಟು ಮೂರು ಹಂತಗಳಲ್ಲಿ ಬಿಹಾರದ 243 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ನವಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + nineteen =
Remember me
