ಬೆಂಗಳೂರು:ನೈರುತ್ಯ ಮುಂಗಾರು ರಾಜ್ಯಕ್ಕೆ ಆಗಮಿಸಿ ಐದಾರು ದಿನ ಕಳೆಯುತ್ತಿದ್ದಂತೆ ವರುಣ ಅಬ್ಬರಿಸುತ್ತಿದ್ದು, ಮುಂದಿನ 5 ದಿನ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಳೆಯಿಂದಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನೂ ಓದಿ:‘ಭಾರತದೊಂದಿಗೆ ಬಲವಾದ ಬಾಂಧವ್ಯ’.. ಅನ್ಯದೇಶಗಳ ಮುಖ್ಯಸ್ಥರು ಪ್ರಧಾನಿ ಮೋದಿಗೆ ಶುಭ ಹಾರೈಕೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ.
ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.
‘ಎನ್​ಡಿಎ ಭಾಗವಾಗಿಯೇ ಇರ್ತೇವೆ’: ಚಂದ್ರಬಾಬು ನಾಯ್ಡು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
