ಮಹಾರಾಷ್ಟ್ರ:ಮಹಿಳೆಯೊಬ್ಬರು ತನ್ನ 29 ವರ್ಷದ ಮಗ ಸಾವನ್ನಪ್ಪಿದ್ದಾನೆಂದು ಸುಳ್ಳು ದಾಖಲೆ ಸೃಷ್ಟಿಸಿ 2 ಕೋಟಿ ವಿಮೆ ಪಡೆಯಲು ಪ್ರಯತ್ನಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ದಿನೇಶ್ 2015ರಲ್ಲಿ ಎಲ್​ಐಸಿ ಪಾಲಿಸಿಯನ್ನು ಖರೀದಿಸಿ ಪ್ರೀಮಿಯಂ ಪಾವತಿಸಿದ್ದರು. ದಿನೇಶ್ 2016 ಡಿಸೆಂಬರ್ 25 ರಂದು ಅಹಮದ್ ನಗರ ಜಿಲ್ಲೆಯ ನಗರ ಪುಣೆ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆಂದು 2017 ಮಾರ್ಚ್ 14 ರಂದು ಆತನ ತಾಯಿ ನಂದಾಬಾಯಿ ತಕ್ಸಾಲೆ ಇನ್ಶೂರೆನ್ಸ್ ಹಣಕ್ಕೆ ಅರ್ಜಿಸಲ್ಲಿಸಿದ್ದರು.
ಇದನ್ನೂ ಓದಿ:ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ತುಕುಡೆ..ತುಕಡೆ ಪಕ್ಷ; ಅಮಿತ್ ಷಾವಿಮೆ ಹಣ ತೆಗೆದುಕೊಳ್ಳಲು ನಂದಾಬಾಯಿ ತಮ್ಮ ಮಗ ದಿನೇಶ್ ಅವರ ವಾರ್ಷಿಕ ಆದಾಯ 8 ಕೋಟಿ ಎಂದು ಅರ್ಜಿಯ ಜೊತೆಗೆ ಕೆಲವು ದಾಖಲಾತಿಗಳನ್ನು ಸಲ್ಲಿಸಿದ್ದರು. ಅಲ್ಲದೆ 38.85 ಲಕ್ಷ ಕೃಷಿ ಆದಾಯ ಮತ್ತು ಹೋಟೆಲ್‌ ಉದ್ಯಮದಿಂದ 3 ಲಕ್ಷ ಆದಾಯವಿದೆ ಎಂದು ನಾಲ್ಕು ವರ್ಷಗಳ ನಕಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲಾಗಿದೆ. ಆದರೆ ಎಲ್‌ಐಸಿ ಅಧಿಕಾರಿಗಳು ಆಕೆಯ ಅರ್ಜಿಯನ್ನು ಪರಿಶೀಲಿಸುವಾಗ, ಆಕೆ ಸಲ್ಲಿಸಿದ್ದ ಮರಣ ಪ್ರಮಾಣಪತ್ರ ಸಹ ನಕಲಿ ಎಂಬುದು ಸಾಬೀತಾಗಿದೆ.
ತಾಯಿಯ, ಮಗ ಇಬ್ಬರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿ ಪಾರ್ಕ್ ಪೊಲೀಸರು ಅಹಮದ್‌ನಗರ ಮೂಲದ ಮಹಿಳೆ ನಂದಾಬಾಯಿ ಪ್ರಮೋದ ತಕ್ಸಾಲೆ ಮತ್ತು ಅವರ ಮಗ ದಿನೇಶ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ನಾವು ಅಶ್ವಮೇಧ ಕುದುರೆ ಬಿಟ್ಟಿದ್ದೇವೆ, ಕಾಂಗ್ರೆಸ್​ಗೆ ದಮ್ಮು ತಾಕತ್ ಇದ್ದರೆ ಕಟ್ಟಿ ಹಾಕಿ; ಶ್ರೀರಾಮುಲು ಸವಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − five =
Remember me
