ಇಂಫಾಲ್:ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಗಳಿಬ್ಬರು ಮೃತದೇಹದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಿಬಿಐ ವಿದ್ಯಾರ್ಥಿಗಳು ಕಾಣೆಯಾಗಿರುವ ಪ್ರಕರಣದ ತನಿಖೆ ನಡೆಸುತ್ತಿದ್ದು, ಈವರೆಗೂ ಮೃತದೇಹಳು ಪತ್ತೆಯಾಗದಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೃತರನ್ನು ಮೈಟಿ ಸಮುದಾಯದ ಫಿಜಾಮ್ ಹೆಮ್‌ಜಿತ್ (20), ಹಿಜಾಮ್ ಲಿಂಥೋಯಿಂಗಂಬಿ (17) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:VIDEO| ಬ್ಯಾಕ್​ಫ್ಲಿಪ್​ ಮಾಡಲು ಹೋಗಿ ಫೇಲ್​; ಇದರ ಅಗತ್ಯತೆ ಏನಿತ್ತು ಎಂದ ನೆಟ್ಟಿಗರು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಣಿಪುರ ಸರ್ಕಾರ, ಕೊಲೆಗಾರರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ಹಾಗೂ ರಾಜ್ಯ ಪೊಲೀಸ್​ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ತ್ವರಿತ ಕ್ರಮಕೈಗೊಳ್ಳಲಾಗುವುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿಗಳ ಹತ್ಯೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಕಅಣೆಯಾದವರನ್ನು ಪತ್ತೆ ಹಚ್ಚಲು ಇಷ್ಟು ದಿನ ಬೇಕಾಯಿತಾ ಎಂದು ಹಲವರು ಪ್ರಶ್ನಿಸಿದ್ದಾರೆ. ಜುಲೈನಲ್ಲಿ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ವಿದ್ಯಾರ್ಥಿಗಳಿಬ್ಬರೂ ಪತ್ತೆಯಾಗಿದ್ದರೂ ಅವರನ್ನು ಪೊಲೀಸರು ಪತ್ತೆ ಮಾಡಿಲ್ಲ. ಈ ಪೊಲೀಸರು ಮತ್ತು ಸರ್ಕಾರ ಹೇಗೆ ಕೆಲಸ ಮಾಡುತ್ತಿವೆ? ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 13 =
Remember me
