ನವದೆಹಲಿ:ವಿದೇಶಿ ವಸ್ತುಗಳ ಅವಲಂಬನೆಯಿಂದ ಭಾರತದ ಆರ್ಥಿಕತೆಗೆ ಪೆಟ್ಟು ಬೀಳುತ್ತಿರುವುದು ಮಾತ್ರವಲ್ಲದೇ, ಅದು ಎಷ್ಟು ದುಷ್ಪರಿಣಾಮ ಬೀರುತ್ತಿದೆ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ ಭಾಷಣದಲ್ಲಿ ಹೇಳಿದ್ದರು. ಆದ್ದರಿಂದ ಎಲ್ಲರೂ ವಿದೇಶಿ ಬ್ರ್ಯಾಂಡ್​ ವ್ಯಾಮೋಹ ತೊರೆದು ಸ್ವದೇಶಿಯತ್ತ ಮುಖ ಮಾಡುವಂತೆಯೂ ಅವರು ಸೂಚಿಸಿದ್ದರು.
ಅದರದ್ದೇ ಭಾಗವಾಗಿ ಇದೀಗ ಜೂನ್ 1ರಿಂದ ಅರೆ ಸೇನಾಪಡೆ ಕ್ಯಾಂಟೀನ್​ಗಳಲ್ಲಿ ಸ್ವದೇಶಿ ನಿರ್ಮಿತ ವಸ್ತುಗಳನ್ನು ಮಾತ್ರ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ತಾನು ನುಡಿದಂತೆಯೇ ನಡೆಯಬೇಕು ಎನ್ನುವ ಘೋಷವಾಕ್ಯದೊಂದಿಗೆ ಇದೀಗ ಸ್ವದೇಶಿಯತ್ತ ಮೊದಲ ದಿಟ್ಟ ಹೆಜ್ಜೆಯನ್ನು ಕೇಂದ್ರ ಸರ್ಕಾರ ಇಟ್ಟಿದೆ.
ಇದನ್ನೂ ಓದಿ:ವಿಮಾನ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಾರಾಟಕ್ಕೆ ಮುಹೂರ್ತ ಫಿಕ್ಸ್​- ಇಲ್ಲಿದೆ ನೋಡಿ ಸಂಪೂರ್ಣ ವಿವರ
ಇನ್ನು ಮುಂದೆ ಆತ್ಮ ನಿರ್ಭರ್ ಭಾರತ್ ಅಥವಾ ಸ್ವಾವಲಂಬನೆ ಮತ್ತು ಸ್ಥಳೀಯತೆಗೆ ಆದ್ಯತೆ ಕೊಡಬೇಕೆಂದು ಹೇಳಿದ್ದರು. ಅಂದರೆ ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ ವಸ್ತುಗಳಿಗೆ ಜನರು ಉತ್ತೇಜನ ಕೊಡಬೇಕೆಂಬುದು ಅವರು ಸೂಚ್ಯವಾಗಿ ವಿವರಿಸಿದ್ದರು. ಅದರಂತೆಯೇ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಇದರ ಬಗ್ಗೆ ಟ್ವೀಟ್​ ಮಾಡಿರುವ ಗೃಹ ಸಚಿವ ಅಮಿತ್ ಷಾ, ಜನರು ಸ್ವಾವಲಂಬಿಗಳಾಗಬೇಕು ಮತ್ತು ಸ್ಥಳೀಯ ವಸ್ತುಗಳಿಗೆ ಆದ್ಯತೆ ಕೊಡಬೇಕು ಎಂದು ನಿನ್ನೆ ಮೋದಿಯವರು ಭಾಷಣ ಮಾಡುತ್ತಿದ್ದಾಗ ಹೇಳಿದ್ದರು. ಇದರಿಂದ ಮುಂದಿನ ದಿನಗಳಲ್ಲಿ ಭಾರತವನ್ನು ಜಾಗತಿಕ ಮಟ್ಟದಲ್ಲಿ ನಾಯಕತ್ವದತ್ತ ಕೊಂಡೊಯ್ಯಲಿದೆ. ಇದರ ಭಾಗವಾಗಿ ಪ್ಯಾರಾಮಿಲಿಟರಿಯ ಕ್ಯಾಂಟೀನ್​ನಲ್ಲಿ ಸ್ವದೇಶಿ ನಿರ್ಮಿತ ವಸ್ತುಗಳನ್ನು ಮಾರಾಟ ಮಾಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:VIDEO- ಲಾಕ್​ಡೌನ್​ ಎಫೆಕ್ಟ್​: ಕೋರ್ಟ್​ ಮುಂದೆ ಭರ್ಜರಿ ವ್ಯಾಯಾಮ! ಇದ್ಯಾಕೆ ಅಂತೀರಾ?
ಇದು ಜೂನ್ 1ರಿಂದ ಅನ್ವಯವಾಗಲಿದೆ. ಸುಮಾರು 10 ಲಕ್ಷ ಸಿಎಪಿಎಫ್ ಸಿಬ್ಬಂದಿ ಮತ್ತು 50 ಲಕ್ಷ ಅವರ ಕುಟುಂಬ ಸದಸ್ಯರು ಸ್ವದೇಶಿ ವಸ್ತುಗಳನ್ನು ಬಳಸಲಿದ್ದಾರೆ ಎಂದು ಷಾ ಟ್ವಿಟರ್​ನಲ್ಲಿ ತಿಳಿಸಿದ್ದಾರೆ.
कल माननीय प्रधानमंत्री श्री@narendramodiजी ने देश को आत्मनिर्भर बनाने और लोकल प्रोडक्ट्स (भारत में बने उत्पाद) उपयोग करने की एक अपील की जो निश्चित रूप से आने वाले समय में भारत को विश्व का नेतृत्व करने का मार्ग प्रशस्त करेगी।pic.twitter.com/KlYD9Z7UVt
— Amit Shah (@AmitShah)May 13, 2020

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − nine =
Remember me
