ನವದೆಹಲಿ: ಜಗತ್ತಿನಾದ್ಯಂತ ಕಾಡುತ್ತಿರುವ ಕೋವಿಡ್​​ 19 ಸೋಂಕಿನ ವಿಚಾರದಲ್ಲಿ ಭಾರತ ಈಗ ದಾಖಲೆಯೊಂದಕ್ಕೂ ಪಾತ್ರವಾಗಿದೆ. ದೇಶದಲ್ಲಿ ಈಗ ಗುಣವಾದವರ ಸಂಖ್ಯೆ 51 ಲಕ್ಷಕ್ಕೆ ತಲುಪಿದ್ದು, ಇದು ಜಗತ್ತಿನಲ್ಲೇ ಅತ್ಯಧಿಕ ಎಂಬ ಹೆಗ್ಗಳಿಕೆಯನ್ನು ತಂದಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 70,589 ಕರೊನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಪ್ರಮಾಣ 61 ಲಕ್ಷವನ್ನು ದಾಟಿದೆ. ಆದರೆ ಕಳೆದ 14 ಗಂಟೆಗಳಲ್ಲಿ ದೇಶದಲ್ಲಿ 776 ಜನರು ಕೋವಿಡ್​ಗೆ ಬಲಿಯಾಗಿದ್ದು, ಇದುವರೆಗೆ ಒಟ್ಟು 96,318 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಇದನ್ನು ಓದಿ:ಕರೊನಾ ಲಸಿಕೆ ಕಥೆ ಎಲ್ಲಿಗೆ ಬಂತು? ಇಲ್ಲಿ ನೋಡಿ ತಿಳಿದುಕೊಳ್ಳಿ..
ಸದ್ಯ ಭಾರತದಲ್ಲಿ 61.45 ಲಕ್ಷ ಕೋವಿಡ್​ ಸೋಂಕಿತರು ವರದಿಯಾಗಿದ್ದು, ಆ ಪೈಕಿ 9.45 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − ten =
Remember me
