ದಾತಿಯಾ:ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್​​ ನದಿಗೆ ಬಿದ್ದು ಮೂವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ನಡೆದಿದೆ.ಇದನ್ನೂ ಓದಿ:ಅವಹೇಳನಕಾರಿ ಪೋಸ್ಟ್; ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದೂರು ದಾಖಲು
ಬುಹಾರಾ ಗ್ರಾಮದ ಬಳಿ ಸೇತುವೆ ನಿರ್ಮಾಣವಾಗುತ್ತಿದ್ದು, ಜನರ ಸಂಚರಕ್ಕಾಗಿ ಇಲ್ಲಿನ ನದಿಗೆ ಅಡ್ಡಲಾಗಿ ತಾತ್ಕಲಿಕವಾಗಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಮಂಗಳವಾರ ತಡರಾತ್ರಿ ಟ್ರಕ್​ ಇಲ್ಲಿ​ ಸಾಗುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ.ಪರಿಣಾಮವಾಗಿ ಓರ್ವ ಮಹಿಳೆ ಹಾಗೂ ಯುವಕ, ಮೂವರು ಚಿಕ್ಕ ಮಕ್ಕಳು ಮೃತಪಟ್ಟಿದ್ದು, ಇಪ್ಪತ್ನಾಲ್ಕು ಜನರು ಗಾಯಗೊಂಡಿದ್ದಾರೆ. ಅಲ್ಲದೇ, ಹಲವಾರು ಮಕ್ಕಳು ಕಾಣೆಯಾಗಿದ್ದಾರೆ. ಟ್ರಕ್​ನಲ್ಲಿದ್ದವರೆಲ್ಲ ಗ್ವಾಲಿಯರ್‌ನ ಬಿಲ್ಹೇಟಿ ಗ್ರಾಮದ ನಿವಾಸಿಗಳಾಗಿದ್ದು. ಮದುವೆಗಾಗಿ ಟಿಕಮ್‌ಗಢ್‌ಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದು ಮದುವೆ ಮನೆಯಲ್ಲಿ ಶೋಕ ಮಡುಗಟ್ಟಿದೆ.ಇದನ್ನೂ ಓದಿ:ಕಳಪೆ ಬಿತ್ತನೆಬೀಜ ಮಾರಿದರೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಎಚ್ಚರಿಕೆಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ನಡೆದಿದ್ದಾರೆ. ಪೊಲೀಸರ ಈ ಕಾರ್ಯಾಚಾರಣೆಗೆ ಸ್ಥಳೀಯರು, ಮೀನುಗಾರರು ಕೈಜೋಡಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
