ಕಣ್ಣೂರು:ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಚೆರುಪುಳದಲ್ಲಿನ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.
ಇದನ್ನೂ ಓದಿ:ಇದು ಡಬಲ್ ಸ್ಟೇರಿಂಗ್ ಸರ್ಕಾರ; ಬಸ್ಸು ಯಾವ ಕಡೆ ಹೋಗುತ್ತೋ ಗೊತ್ತಿಲ್ಲ: ವಿಜಯೇಂದ್ರ
ಮೃತರನ್ನು ಚೆರುಪುಳ ಮೂಲದ ಶಾಜಿ-ಶ್ರೀಜಾ ದಂಪತಿಗಳು ಹಾಗೂ ಮಕ್ಕಳಾದ ಸೂರಜ್, ಸುರಬಿ ಮತ್ತು ಸುಜಿನ್​ ಎಂದು ಗುರುತಿಸಲಾಗಿದೆ. ಶ್ರೀಜಾ ಮತ್ತು ಶಾಜಿ ಕಳೆದ ವಾರವಷ್ಟೆ ಮದುವೆಯಾಗಿದ್ದರು. ಆದರೆ ಶ್ರೀಜಾಗೆ ಈಗಾಗಲೇ ಮತ್ತೊಬ್ಬನ ಜತೆಗೆ ವಿವಾಹವಾಗಿತ್ತು. ಅವನಿಗೆ ವಿಚ್ಛೇದನ ನೀಡದೆ ಶ್ರೀಜಾ, ಈತನ ಜತೆ ವಿವಾಹವಾಗಿದ್ದಳು ಎನ್ನುವ ಆರೋಪಗಳು ಕೇಳಿ ಬಂದಿವೆ.
ದಂಪತಿಗಳು ಮೊದಲು ಮಕ್ಕಳನ್ನು ಕೊಂದ ನಂತರ ನೇಣು ಹಾಕಿಕೊಂಡಿದ್ದಾರೆ ಎಂದು ಶಂಕಿಸಿದ್ದು, ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + sixteen =
Remember me
