ನವದೆಹಲಿ:ವಿತ್ತಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸಂಬಳದಾರರಿಗೆ ಬಂಪರ್​ ಕೊಡುಗೆ ಕೊಟ್ಟಿದ್ದಾರೆ. ಹೊಸ ತೆರಿಗೆ ಪದ್ಧತಿಯಲ್ಲಿ 50 ಸಾವಿರ ಇದ್ದ ಸ್ಟಾಂಡರ್ಡ್​ ಡಿಡಕ್ಷನ್​ ಅನ್ನು 75 ಸಾವಿರಕ್ಕೆ ಏರಿಕೆ ಮಾಡಿದ್ದಾರೆ. ಅಲ್ಲದೆ, ಹೊಸ ತೆರಿಗೆ ಪದ್ಧತಿಯಲ್ಲಿ ಬದಲಾದ ತೆರಿಗೆ ವರ್ಗೀಕರಣ ಈ ಕಳೆಗಿನಂತಿದೆ. ಮತ್ತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಹಳೆಯ ತೆರಿಗೆ ಪದ್ಧತಿಯಲ್ಲಾಗಲಿ ಅಥವಾ ಹೊಸ ತೆರಿಗೆ ಪದ್ಧತಿಯಲ್ಲಾಗಲಿ ಮಾಡಲು ಕೈಹಾಕಿಲ್ಲ.
ಈ ಸ್ಟಾಂಡರ್ಡ್​ ಡಿಡಕ್ಷನ್​ ಏರಿಕೆಯಿಂದ ಆದಾಯ ತೆರಿಗೆ ಪಾವತಿಯಲ್ಲಿ ಒಟ್ಟು 17,500 ರೂ.ಗಳನ್ನು ತೆರಿಗೆದಾರರು ಉಳಿತಾಯ ಮಾಡಬಹುದಾಗಿದೆ.
ಆದಾಯ ತೆರಿಗೆಯನ್ನು ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್​, ವೈಯಕ್ತಿಕ ಆದಾಯ ತೆರಿಗೆ ದರಗಳಿಗೆ ಬರುವುದಾದರೆ, ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವವರಿಗೆ ನಾನು ಎರಡು ಪ್ರಮುಖ ಘೋಷಣೆಗಳನ್ನು ಮಾಡುತ್ತೇನೆ. ಮೊದಲನೆಯದಾಗಿ, ಸಂಬಳದ ಉದ್ಯೋಗಿಗಳ ಸ್ಟ್ಯಾಂಡರ್ಡ್​ ಡಿಡಕ್ಷನ್​ ಅನ್ನು 50,000 ರೂ. ನಿಂದ 75,000 ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಅದೇ ರೀತಿ, ಪಿಂಚಣಿದಾರರಿಗೆ ಕುಟುಂಬ ಪಿಂಚಣಿ ಮೇಲಿನ ಸ್ಟ್ಯಾಂಡರ್ಡ್​ ಡಿಡಕ್ಷನ್​ ಅನ್ನು 15,000 ರೂ.ಗಳಿಂದ 25,000 ರೂ.ಗೆ ಹೆಚ್ಚಿಸಲು ಉದ್ದೇಶಿಸಲಾಗಿದ್ದು, ಇದು ಸುಮಾರು 4 ಕೋಟಿ ವೇತನದಾರರು ಮತ್ತು ಪಿಂಚಣಿದಾರರಿಗೆ ಪರಿಹಾರವನ್ನು ನೀಡುತ್ತದೆ ಎಂದು ವಿತ್ತಸಚಿವೆ ಹೇಳಿದರು.
ಹೊಸ ತೆರಿಗೆ ಪದ್ಧತಿಯಲ್ಲಿ ಬದಲಾದ ತೆರಿಗೆ ವರ್ಗೀಕರಣ ಹೀಗಿದೆ..* 0 ರಿಂದ 3 ಲಕ್ಷ ರೂ.ವರೆಗಿನ ಆದಾಯ ಮೇಲೆ ಯಾವುದೇ ತೆರಿಗೆ ಇಲ್ಲ* 3 ರಿಂದ 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ಶೇ. 5 ರಷ್ಟು ತೆರಿಗೆ* 7 ರಿಂದ 10 ಲಕ್ಷ ರೂ.ವರೆಗಿನ ಆದಾಯದ ಮೇಲೆ ಶೇ.10 ರಷ್ಟು ತೆರಿಗೆ* 10 ರಿಂದ 12 ಲಕ್ಷ ರೂ.ವರೆಗಿನ ಆದಾಯದ ಮೇಲೆ ಶೇ.15 ರಷ್ಟು ತೆರಿಗೆ* 12 ರಿಂದ 15 ಲಕ್ಷ ರೂ.ವರೆಗಿನ ಆದಾಯದ ಮೇಲೆ ಶೇ.20 ರಷ್ಟು ತೆರಿಗೆ* 15 ಲಕ್ಷ ರೂ.ಗಿಂತ ಹೆಚ್ಚಿನ್ನ ಮೊತ್ತದ ಆದಾಯಕ್ಕೆ ಶೇ. 30 ರಷ್ಟು ತೆರಿಗೆ
#WATCH| On personal income tax rates in new tax regime, FM Sitharaman says, “Under new tax regime, tax rate structure to be revised as follows – Rs 0-Rs 3 lakh -Nil; Rs 3-7 lakh -5% ; Rs 7-10 lakh-10% ; Rs 10-12 lakh-15%; 12-15 lakh- 20% and above Rs 15 lakh-30%.”pic.twitter.com/zQd7A4OsnT
— ANI (@ANI)July 23, 2024

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.(ಏಜೆನ್ಸೀಸ್​)
ಚಿನ್ನ ಪ್ರಿಯರಿಗೆ ಖುಷಿ ಸುದ್ದಿ : ಬಂಗಾರ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ

ಮೊದಲ ಬಾರಿ ಉದ್ಯೋಗ ಪಡೆದವರಿಗೆ 15 ಸಾವಿರ ರೂಪಾಯಿ ಕೊಡುಗೆ: ವಿತ್ತಸಚಿವೆ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 12 =
Remember me
