ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತೆ, ಸದ್ಯ ಜೈಲಿನಲ್ಲಿರುವ ವಿ.ಕೆ.ಶಶಿಕಲಾ ನಟರಾಜನ್​ ಅವರ 2000 ಕೋಟಿ ರೂ.ಮೌಲ್ಯದ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ (ಇನ್​ಕಮ್​ ಟ್ಯಾಕ್ಸ್ ಡಿಪಾರ್ಟ್​ಮೆಂಟ್​) ಇಂದು ಮುಟ್ಟುಗೋಲು ಹಾಕಿಕೊಂಡಿದೆ.
ಬೇನಾಮಿ ನಿಷೇಧ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್ತಿಯೂ ಜಪ್ತಿಯಾಗಿದೆ. ಇವು ಶಶಿಕಲಾ, ಇಳವರಸಿ ಮತ್ತು ಸುಧಾಕರನ್​ ಹೆಸರಿನಲ್ಲಿ ಇದೆ. ಇಲ್ಲೀಗ ಐಟಿ ಇಲಾಖೆಯ ಬೇನಾಮಿ ನಿಷೇಧ ದಳ ಮುಟ್ಟುಗೋಲು ನೋಟಿಸ್ ಹಾಕಿದೆ.ಈ ಬಗ್ಗೆ ಐಟಿ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದ್ದು, ಒಟ್ಟಾರೆ 2000 ಕೋಟಿ ರೂ.ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿಯೇ ಜೈಲುಪಾಲಾಗಿರುವ ಶಶಿಕಲಾ ಇನ್ನು ನಾಲ್ಕು ತಿಂಗಳಲ್ಲಿ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ತನ್ನ ಬಿಡುಗಡೆಯ ಬಗ್ಗೆ ಹೊರಗಿನವರಿಗೆ ಮಾಹಿತಿ ನೀಡಬೇಡಿ ಎಂದು ಅವರು ಜೈಲು ಅಧಿಕಾರಿಗಳಿಗೆ ಲಿಖಿತವಾಗಿ ತಿಳಿಸಿದ್ದಾರೆ. ಇಳವರಸಿ ಮತ್ತು ಸುಧಾಕರನ್​ ಕೂಡ ಸದ್ಯ ಜೈಲಿನಲ್ಲಿಯೇ ಇದ್ದಾರೆ. (ಏಜೆನ್ಸೀಸ್)
ಶಾಹೀನ್​ಬಾಗ್​ನಂಥ ಸ್ಥಳದಲ್ಲಿ ಪ್ರತಿಭಟನೆ ಸಹಿಸಲ್ಲ- ಕೋರ್ಟ್​ ಆದೇಶ ಕಾಯದೇ ಕ್ರಮ ತೆಗೆದುಕೊಳ್ಳಿ: ಸುಪ್ರೀಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + seven =
Remember me
