ಮುಂಬೈ:ನ್ಯಾಷನಲ್ ಕಾಂಗ್ರೆಸ್​ ಪಾರ್ಟಿ ಮುಖ್ಯಸ್ಥ ಶರದ್ ಪವಾರ್​ಗೆ ಆದಾಯ ತೆರಿಗೆ ಇಲಾಖೆಯು ನೋಟಿಸ್​ ನೀಡಿದ್ದು, ಇದೀಗ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡುವಂತೆ ಮಾಡಿದೆ.
ಆದಾಯ ತೆರಿಗೆ ಇಲಾಖೆಯ ನೋಟಿಸ್​ ಬಂದಿರುವುದನ್ನು ಸ್ವತಃ ಶರದ್ ಪವಾರ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್​ ಹಿನ್ನೆಲೆಯಲ್ಲಿ ನೋಟಿಸ್​ ಬಂದಿದ್ದು, ಇಲಾಖೆ ಸ್ಪಷ್ಟನೆ ಹಾಗೂ ವಿವರಣೆ ಕೋರಿದೆ ಎಂದು ಅವರೇ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ನಿನ್ನೆ ನನಗೆ ನೋಟಿಸ್ ಬಂದಿದೆ. ಎಲ್ಲರ ನಡುವೆ ಕೇಂದ್ರ ಸರ್ಕಾರ ನಮ್ಮನ್ನು ಪ್ರೀತಿಸುತ್ತಿದೆ ಎಂಬ ಬಗ್ಗೆ ನಮಗೆ ಸಂತೋಷವಿದೆ. ನಾವು ನೋಟಿಸ್​ಗೆ ಉತ್ತರ ನೀಡುತ್ತೇವೆ’ ಎಂಬುದಾಗಿ ಶರದ್ ಪವಾರ್ ಹೇಳಿದ್ದಾರೆ. ಶರದ್​ ಪವಾರ್​ ಪುತ್ರಿ ಸುಪ್ರಿಯಾ ಸುಲೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ಐಟಿ ನೋಟಿಸ್​ ಜಾರಿಯಾಗಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಅವರು ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದ್ದರು. (ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + twelve =
Remember me
