ಪಟನಾ:ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​ ಆಗುತ್ತಿದೆ. ಮಹಿಳೆಯೊಬ್ಬಳು ಮೊಬೈಲ್​ ಮಾತನಾಡುತ್ತಾ ನಿಂತಿರುವಾಗ ಹಿಂದಿನಿಂದ ಬರುವ ಯುವಕನೊಬ್ಬ ಮಹಿಳೆಯನ್ನು ಹಿಡಿದುಕೊಂಡು ಬಲವಂತವಾಗಿ ತುಟಿ ಚುಂಬಿಸುವ ದೃಶ್ಯ ವಿಡಿಯೋದಲ್ಲಿದೆ. ಯುವಕ ವರ್ತನೆಗೆ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಠಿಣ ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದಾರೆ.
ಈ ಪ್ರಕರಣದ ತಾಜಾ ಬೆಳವಣಿಗೆ ಏನೆಂದರೆ, ಮಹಿಳೆಗೆ ಕಿರುಕುಳ ನೀಡಿದ ಯುವಕನ ವಿರುದ್ಧ ದೂರು ದಾಖಲಾಗಿದೆ. ಪೊಲೀಸ್​ ಮೂಲಗಳ ಪ್ರಕಾರ ಈ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಇದೇ ತಿಂಗಳ ಮಾರ್ಚ್​ 10ರಂದು ಈ ಘಟನೆ ನಡೆದಿದೆ. ಮಹಿಳೆಯು ಆರೋಗ್ಯ ಕಾರ್ಯಕರ್ತೆಯಾಗಿದ್ದು, ಮೊಬೈಲ್​ನಲ್ಲಿ ಮಾತನಾಡುತ್ತಿದ್ದಾಗ ಹಿಂಬದಿಯಿಂದ ಬಂದ ಯುವಕ ಹಿಡಿದೆಳೆದು ತಬ್ಬಿಕೊಂದು ಬಲವಂತವಾಗಿ ತುಟಿಗೆ ಚುಂಬಿಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಖ್ಯಾತ ಖಳನಾಯಕನಿಗೆ ವಿಷವುಣಿಸಿದ ಸಹೋದರ: ಕಿಡ್ನಿ ಸಮಸ್ಯೆಯಿಂದ ಕಣ್ಣೀರಿಡುತ್ತಿರುವ ಪೊನ್ನಂಬಲಂ
ಈ ಘಟನೆಯ ಬೆನ್ನಲ್ಲೇ ಸಂತ್ರಸ್ತೆ ಹತ್ತಿರದ ಪೊಲೀಸ್​ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಈ ಬಗ್ಗೆ ಮಾತನಾಡಿರುವ ಸಂತ್ರಸ್ತೆ ಆತ ಯಾರು ಎಂಬುದು ನನಗೆ ತಿಳಿದಿಲ್ಲ. ಆತ ನನಗೆ ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಆಸ್ಪತ್ರೆಯ ಕಾಪೌಂಡ್​ ಗೋಡೆ ಜಿಗಿದು ಬಂದು ಈ ಕೃತ್ಯ ಎಸಗಿದ್ದಾನೆ. ನನ್ನ ಜೊತೆ ಅನುಚಿತವಾಗಿ ವರ್ತಿಸಿದಾಗ ತಕ್ಷಣ ನಾನು ತಡೆದೆ. ನಾನು ಆಸ್ಪತ್ರೆಯ ಸಿಬ್ಬಂದಿಯನ್ನು ಕೂಗಿಕೊಂಡಾಗ ಆತ ಅಲ್ಲಿಂದ ಕಾಲ್ಕಿತ್ತ ಎಂದು ಹೇಳಿದ್ದಾರೆ.
ಆತನನ್ನು ಬಂಧಿಸಿ, ಕಠಿಣ ಕ್ರಮವನ್ನು ಜರುಗಿಸಬೇಕು. ಆಸ್ಪತ್ರೆಯ ಕಾಪೌಂಡ್​ ಗೋಡೆ ತುಂಬಾ ಚಿಕ್ಕದಾಗಿದೆ. ಗೋಡೆಯ ಮೇಲೆ ತಂತಿ ಬೇಲಿಯನ್ನು ಅಳವಡಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿಯ ಬಳಿ ಮನವಿ ಮಾಡಿದ್ದೇನೆ ಎಂದು ಸಂತ್ರಸ್ತೆ ಮಾಧ್ಯಮದ ಮುಂದೆ ತಿಳಿಸಿದ್ದಾರೆ.
ಇದೀಗ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪ್ರುಯತ್ನ ನಡೆಯುತ್ತಿದೆ.(ಏಜೆನ್ಸೀಸ್​)
ವರದಕ್ಷಿಣೆಯಾಗಿ ಟ್ರ್ಯಾಕ್ಟರ್​ ಕೇಳಿದ ವರನಿಗೆ ಬಿಗ್​ ಶಾಕ್​ ಕೊಟ್ಟ ವಧು!

37 ವರ್ಷದ ನಂತರ ಬಿ.ಟೆಕ್ ಪದವಿ ಪ್ರಮಾಣಪತ್ರ ಪಡೆದುಕೊಂಡ ಆರ್‌ಜಿವಿ; ತಡವಾಗಿ ಸ್ವೀಕರಿಸಲು ಕಾರಣ ಬಿಟ್ಟಿಟ್ಟ ರಾಮ್ ಗೋಪಾಲ್ ವರ್ಮಾ

ಗುಳಿಗ ದೈವಕ್ಕೆ ಅಪಮಾನ ಪ್ರಕರಣ; ಸ್ಪಷ್ಟನೆ ನೀಡಿದ ಆರಗ ಜ್ಞಾನೇಂದ್ರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 4 =
Remember me
