ನವದೆಹಲಿ:ಮಹಾರಾಷ್ಟ್ರದ ಪಕ್ಷೇತರ ಲೋಕಸಭಾ ಸದಸ್ಯ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್​ಗೆ ಬೆಂಬಲ ವ್ಯಕ್ತಪಡಿಸಿದರು. ಗುರುವಾರ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.
ಇದನ್ನೂ ಓದಿ:MLC Election: ದ.ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು!
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತದಾದಾ ಪಾಟೀಲ್ ಅವರ ಮೊಮ್ಮಗ ಪಾಟೀಲ್ ಅವರು ಸಾಂಗ್ಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ. ಸಾಂಗ್ಲಿ ಸಂಸದೀಯ ಸ್ಥಾನವನ್ನು ಶಿವಸೇನೆ-ಯುಬಿಟಿಗೆ ಹಂಚಿಕೆ ಮಾಡಿದ ನಂತರ ಮಾಜಿ ಕಾಂಗ್ರೆಸ್ ನಾಯಕ, ಪಾಟೀಲ್ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಸಾಂಗ್ಲಿಯಿಂದ ಚುನಾಯಿತ ಸಂಸದರಾದ ವಿಶಾಲ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದುಕೊಂಡಿದೆ. 293 ಸ್ಥಾನಗಳಲ್ಲಿ ಗೆಲವು ಸಾಧಿಸಿರುವ ಬಿಜೆಪಿ ನೇತೃತ್ವದ ಎನ್​ಡಿಯ ಮೈತ್ರಿಕೂಟ ಜೂನ್ 09 ರಂದು ಸರ್ಕಾರ ರಚನೆ ಮಾಡಲಿದೆ. ಮೂರನೇ ಬಾರಿಗೆ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಗೆಲುವು

MLC Election: ದ.ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 7 =
Remember me
